Categories
ತೀರ್ಥಹಳ್ಳಿ

ತೀರ್ಥಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಿದ್ಧತೆ..!!

ತೀರ್ಥಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಿದ್ಧತೆ..!!
– ಮನೆ ಮನೆಯಲ್ಲಿ ಸುಮಂಗಲಿಯರ ಸಂಭ್ರಮದ ಸಡಗರ
– ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತಾಚರಣೆ

NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ತಾಲ್ಲೂಕಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಣೆ ಮಾಡಲು ಸಿದ್ಧತೆ ಮಾಡಲಾಗಿದೆ. ಶುಭ ಶುಕ್ರವಾರದ ದಿನ ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರು ಸಂಭ್ರಮಿಸಿದ್ದಾರೆ. ಲಕ್ಷ್ಮಿದೇವಿಯನ್ನು ಆರಾಧಿಸುವ ಮುತ್ತೈದೆಯರೇ ಆಚರಿಸುವ ವಿಶೇಷವಾದ ವ್ರತ ವರಮಹಾಲಕ್ಷ್ಮಿ ಹಬ್ಬ ಬೆಳಿಗ್ಗೆಯಿಂದಲೇ ಎಲ್ಲೆಡೆ ಆಚರಣೆ ಸಿದ್ಧತೆ ಕಂಡು ಬಂದಿದು. ಮನೆ ಮನೆಯಲ್ಲಿ ಸುಮಂಗಲಿಯರ ಸಡಗರ, ಸಂಪತ್ತಿನ ಅಧಿದೇವತೆ ದರ್ಶನಕ್ಕಾಗಿ ಹೋಗುವ ಮಹಿಳಾ ಭಕ್ತಾದಿಗಳಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ಆಗಸ್ಟ್ 8ರ ಶುಕ್ರವಾರ ವರಮಹಾಲಕ್ಷ್ಮೀ ವ್ರತಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಗುವುದು. ಅಂದು ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ವರಮಹಾಲಕ್ಷ್ಮೀ ವಿಶೇಷ ವ್ರತಾಚರಣೆ ನಡೆಯುವುದು ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ವಿಶೇಷವಾಗಿ ದೇವಿ ಸ್ತುತಿಯ ಅರ್ಚನೆ ಇರುತ್ತದೆ. ಅಂದು ದೇವಸ್ಥಾನಕ್ಕೆ ಆಗಮಿಸುವ ಎಲ್ಲಾ ಸುಮಂಗಲಿಯರಿಗೆ ಬಾಗಿನ ವಿತರಿಸಲಾಗುವುದು. ಭಾಗವಹಿಸಿದ ಭಕ್ತರಿಗೂ ಪ್ರಸಾದದ ವ್ಯವಸ್ಥೆ ಇರುತ್ತದೆ. ಭಕ್ತರು ಎಂದಿನಂತೆ ಶ್ರದ್ಧಾ ಭಕ್ತಿಯಿಂದ ಈ ದೇವತಾ ಕಾರ್ಯದಲ್ಲಿ ಭಾಗವಹಿಸಿ ಶ್ರೀ ದೇವಿಯ ಅನುಗ್ರಹಕ್ಕೆ ಪಾತ್ರರಾಗುವಂತೆ ದೇವಸ್ಥಾನದ ಆಡಳಿತ ಮಂಡಳಿಯ ಕಾರ್ಯದರ್ಶಿ ಜಿ.ಸತ್ಯನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.