ಪಿಯುಸಿ: ತೀರ್ಥಹಳ್ಳಿ ಸಹ್ಯಾದ್ರಿ ಪಿಯು ಕಾಲೇಜು ಸಾಧನೆ
– ಶೇಕಡ 100 ಫಲಿತಾಂಶ: ರಾಜ್ಯಕ್ಕೆ ಹಲವು ರ್ಯಾಂಕ್
– 76 ವಿದ್ಯಾರ್ಥಿಗಳಲ್ಲಿ 52 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ತೀರ್ಥಹಳ್ಳಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮತ್ತೊಮ್ಮೆ ಶೇ.100 ಫಲಿತಾಂಶ ಪಡೆದುಕೊಳ್ಳುವ ಮೂಲಕ, ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ತೀರ್ಥಹಳ್ಳಿ ತಾಲ್ಲೂಕಿನ ಸಹ್ಯಾದ್ರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಅವನಿ ಆರ್ ಅವರು ಶೇಕಡ 98.50ರಷ್ಟು ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಮಟ್ಟದಲ್ಲಿ 9ನೇ ಸ್ಥಾನ, ಸಿಂಚನ ಡಿ.ಎಸ್ ಅವರು ಶೇಕಡ 98.16ರಷ್ಟು ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯ ಮಟ್ಟದಲ್ಲಿ ಹತ್ತನೇ ಸ್ಥಾನ, ಪ್ರೇರಣಾ ಪ್ರಭು ಅವರು ಶೇಕಡ 98.16ರಷ್ಟು ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ರಾಜ್ಯ ಮಟ್ಟದಲ್ಲಿ ಹತ್ತನೇ ಸ್ಥಾನ ಮತ್ತು ಆವಿಷ್ಕಾರ್ ಎನ್ ಅವರು ಶೇಕಡ 98ರಷ್ಟು ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ರಾಜ್ಯ ಮಟ್ಟದಲ್ಲಿ 12ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ವಾಣಿಜ್ಯ ವಿಭಾಗದಲ್ಲಿನ 76 ವಿದ್ಯಾರ್ಥಿಗಳಲ್ಲಿ 52 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 24 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ವಿಜ್ಞಾನ ವಿಭಾಗದಲ್ಲಿ 69 ವಿದ್ಯಾರ್ಥಿಗಳಲ್ಲಿ 30 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 39 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯನ್ನು ಪಡೆದುಕೊಳ್ಳುವುದರ ಮೂಲಕ ಶಿಕ್ಷಣ ಸಂಸ್ಥೆಗೆ ಶೇಕಡ 100ರಷ್ಟು ಫಲಿತಾಂಶವನ್ನು ತಂದುಕೊಟ್ಟು, ಪೋಷಕರ ಮತ್ತು ವಿದ್ಯಾಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರು, ಆಡಳಿತಾಧಿಕಾರಿಗಳು, ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಬೋಧಕೇತರ ವರ್ಗದವರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.








