Categories
ತೀರ್ಥಹಳ್ಳಿ

ಮಲೆನಾಡಲ್ಲಿ ಅರಣ್ಯ ಒತ್ತುವರಿಗೆ ಶಿಕ್ಷೆ ಫಿಕ್ಸ್!?

ಮಲೆನಾಡಲ್ಲಿ ಅರಣ್ಯ ಒತ್ತುವರಿಗೆ ಶಿಕ್ಷೆ ಫಿಕ್ಸ್!?
– ಅರಣ್ಯ ಒತ್ತುವರಿದಾರನಿಗೆ 1 ವರ್ಷ ಜೈಲು, 5 ಸಾವಿರ ರೂ. ದಂಡ !!
* ತೀರ್ಪು ನೀಡಿದ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ಕೋರ್ಟ್
* ದಂಡ ತಪ್ಪಿದಲ್ಲಿ 3 ತಿಂಗಳು ಸಾದಾ ಜೈಲು ಶಿಕ್ಷೆ

NAMMUR EXPRESS NEWS
ತೀರ್ಥಹಳ್ಳಿ: ಮೀಸಲು ಕಿರು ಅರಣ್ಯ ಪ್ರದೇಶ ಒತ್ತುವರಿ ಸಾಬೀತಾದ ಹಿನ್ನೆಲೆಯಲ್ಲಿ ತಾಲೂಕಿನ ಮೇಲಿನ ಕುರುವಳ್ಳಿ ಗ್ರಾ.ಪಂ. ವ್ಯಾಪ್ತಿಯ ಹುಣಸವಳ್ಳಿ ಗ್ರಾಮದ ಉಮೇಶ್ (43)ಗೆ 1 ವರ್ಷ ಸಾದಾ ಜೈಲು ಶಿಕ್ಷೆ 5 ಸಾವಿರ ರೂ. ದಂಡ ವಿಧಿಸಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಹುಣಸವಳ್ಳಿ ಗ್ರಾಮದ ಸರ್ವೆ ನಂಬರ್ 13ರಲ್ಲಿ 12 ಗುಂಟೆ ಕಿರು ಅರಣ್ಯ ಪ್ರದೇಶ ಒತ್ತುವರಿ ಮಾಡಿದ ಕುರಿತಂತೆ ತೀರ್ಥಹಳ್ಳಿ ವಲಯ ಅರಣ್ಯಾಧಿಕಾರಿ 2019ರಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು. ಈ ಸಂಬಂಧ ವಿಶೇಷ ನ್ಯಾಯಾಲಯದ ನ್ಯಾಯಿಕ ಸದಸ್ಯರಾದ ಪಾಟೀಲ ನಾಗಲಿಂಗನಗೌಡ, ಕಂದಾಯ ಸದಸ್ಯ ಕೆ.ಎಚ್‌. ಅಶ್ವತ್ಥನಾರಾಯಣಗೌಡ ನೇತೃತ್ವದ ಪೀಠ ವಿಚಾರಣೆ ನಡೆಸಿ ಮಾರ್ಚ್ 3ರಂದು ತೀರ್ಪು ನೀಡಿದೆ.
ಒತ್ತುವರಿ ಆರೋಪಿ ದಂಡ ಪಾವತಿಸಲು ವಿಫಲವಾದರೆ 3 ತಿಂಗಳು ಸಾದಾ ಜೈಲು ಶಿಕ್ಷೆ ಅನುಭವಿಸಬೇಕು.ತಕ್ಷಣ ಒತ್ತುವರಿ ಜಮೀನು ತೆರವು ಮಾಡಬೇಕು. ಈ ಕುರಿತಂತೆ 60 ದಿನದೊಳಗೆ ವರದಿ ಸಲ್ಲಿಸುವಂತೆ ವಲಯಾರಣ್ಯಾಧಿಕಾರಿಗೆ ನ್ಯಾಯಪೀಠ ಆದೇಶಿಸಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.