ತೀರ್ಥಹಳ್ಳಿಯಲ್ಲಿ ರಾಜ್ಯೋತ್ಸವದ ಸಂಭ್ರಮ!
– ಪಟ್ಟಣ ಪಂಚಾಯಿತಿ ವತಿಯಿಂದ ಸುವರ್ಣ ಕರ್ನಾಟಕ ಸಂಭ್ರಮಾಚರಣೆ ಕಾರ್ಯಕ್ರಮ
– ಆಳ್ವಾಸ್ ನುಡಿಸಿರಿ ವಿರಾಸತ್ ನೃತ್ಯ ವೈಭವ
– ತೀರ್ಥಹಳ್ಳಿ ಮೂಲದ ಅಧಿಕಾರಿಗಳಿಗೆ ಸನ್ಮಾನದ ಗೌರವ
NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವತಿಯಿಂದ ಸುವರ್ಣ ಕರ್ನಾಟಕ ಸಂಭ್ರಮಾಚರಣೆಯ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕರ್ನಾಟಕದ ಪ್ರತಿಷ್ಠಿತ ಆಳ್ವಾಸ್ ಶಿಕ್ಷಣ ಸಂಸ್ಥೆ ವತಿಯಿಂದ ಆಳ್ವಾಸ್ ನುಡಿಸಿರಿ ವಿರಾಸತ್ ಘಟಕ ಸಹಭಾಗಿತ್ವವನ್ನು ನೀಡುತ್ತಿದ್ದು ಸುಮಾರು 300 ವಿದ್ಯಾರ್ಥಿ ವಿದ್ಯಾರ್ಥಿನಿಯರು ಆಳ್ವಾಸ್ ಸಾಂಸ್ಕೃತಿಕ ವೈಭವವದ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
23.11.2024ರಬೆಳಗ್ಗೆ ಒಂಬತ್ತು ಗಂಟೆಗೆ ಸರಿಯಾಗಿ ತೀರ್ಥಹಳ್ಳಿ ಪಟ್ಟಣದ ಗೋಪಾಲಗೌಡ ರಂಗ ಮಂದಿರದ ಮುಂಭಾಗದ ಮೈದಾನದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದಂತಹ
ರಹಮತ್ ಉಲ್ಲಾ ಅಸದಿ ರಾಷ್ಟ್ರ ಧ್ವಜಾರೋಹಣ ಮಾಡುವ ಮುಖಾಂತರ ದಿನದ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಿದ್ದಾರೆ. ನಾಡ ಧ್ವಜವನ್ನು ತೀರ್ಥಹಳ್ಳಿಯ ವಿಶ್ರಾಂತಿ ಕನ್ನಡ ಉಪನ್ಯಾಸಕರಾದ ಜಿಕೆ ರಮೇಶ್ ಅವರು ಧ್ವಜಾರೋಹಣ ನಿರ್ವಹಿಸಲಿದ್ದು ರಾಷ್ಟ್ರಗೀತೆ ನಾಡಗೀತೆ ಐದು ಕನ್ನಡ ಗೀತೆಗಳು ಪ್ರಾಥಮಿಕ ಮತ್ತು ಪ್ರೌಢ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ನೆರವೇರಿಸಿಕೊಡಲಿದ್ದು ಈ ಕಾರ್ಯಕ್ರಮದ ವೇದಿಕೆಯಲ್ಲಿ ಡಾ.ಎಚ್ಎಸ್ ಕೃಷ್ಣಪ್ಪ ಸುವರ್ಣ ಮಹೋತ್ಸವ ರಾಜ್ಯ ಪ್ರಶಸ್ತಿ ಪುರಸ್ಕೃತ ಇವರನ್ನು ಪಟ್ಟಣ ಪಂಚಾಯಿತಿ ರಾಜ್ಯೋತ್ಸವ ಸನ್ಮಾನವನ್ನು ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯ ಅಧ್ಯಕ್ಷರಾದ ಅಸಾದಿ ಅವರು ಅಧ್ಯಕ್ಷತೆ ವಹಿಸಲಿದ್ದು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ತೀರ್ಥಹಳ್ಳಿ ಗ್ಯಾರಂಟಿ ಅನುಷ್ಠಾನ ಕಮಿಟಿ ಅಧ್ಯಕ್ಷರಾದ ಸಚೀಂದ್ರ ಹೆಗಡೆ,ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ರಮೇಶ್ ಶೆಟ್ಟಿ, ತಹಸೀಲ್ದಾರ್ ರಂಜಿತ್, ತೀರ್ಥಹಳ್ಳಿ ಶಿಕ್ಷಣಧಿಕಾರಿ ಗಣೇಶ್, ತಾಲೂಕಿನ ಡಿವೈಎಸ್ಪಿ ಗಜಾನನ ಸುತಾರ, ಕನ್ನಡ ರಕ್ಷಣಾ ವೇದಿಕೆಯ ಸುರೇಂದ್ರ ಪಟ್ಟಣ, ಪಟ್ಟಣ ಪಂಚಾಯತಿ ಉಪಾಧ್ಯಕ್ಷರಾದಂತಹ ಗೀತಾ ರಮೇಶ್, ಪಂಚಾಯಿತಿಯ ಸ್ಥಾಯಿ ಸಮಿತಿ ಅಧ್ಯಕ್ಷರಾದಂತಹ ಗಣಪತಿ,ಪಟ್ಟಣ ಪಂಚಾಯತಿಯ ಎಲ್ಲಾ ಗೌರವಾನ್ವಿತ ಸದಸ್ಯರುಗಳು ಭಾಗವಹಿಸಲಿದ್ದು ತೀರ್ಥಹಳ್ಳಿ ಪಟ್ಟಣದ ಪ್ರಾಥಮಿಕ ಮತ್ತು ಪ್ರೌಢಶಾಲೆ ಮತ್ತು ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು 1500ಕ್ಕಿಂತ ಅಧಿಕ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದು ಬೆಳಗಿನ ಕಾರ್ಯಕ್ರಮ ನಡೆಯಲಿದೆ.
ಸಂಜೆ ಆಳ್ವಾಸ್ ನುಡಿ ಸಿರಿ ಕಾರ್ಯಕ್ರಮ
ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮವು ಸಂಜೆ ಐದು ಮೂವತ್ತಕ್ಕೆ ಸರಿಯಾಗಿ ಪ್ರಾರಂಭಗೊಳ್ಳಲಿದ್ದ ಸಂಜೆಯ ಕಾರ್ಯಕ್ರಮವನ್ನು ತೀರ್ಥಹಳ್ಳಿ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರ ಉದ್ಘಾಟಿಸಲಿದ್ದು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಡಾ.ಆರ್ ಎಂ ಮಂಜುನಾಥ್ ಗೌಡ, ವಿಶೇಷ ಆಹ್ವಾನಿತರಾಗಿ ರಾಜ್ಯದ ಮಾಜಿ ಶಿಕ್ಷಣ ಸಚಿವರಾದಂತ ಕಿಮ್ಮನೆ ರತ್ನಾಕರ್, ಆಳ್ವಾಸ್ ಸಂಸ್ಥೆಯ ಮುಖ್ಯಸ್ಥರಾದ ಮೋಹನ್ ಆಳ್ವ, ಗ್ಯಾರಂಟಿ ಅನುಷ್ಠಾನ ಕಮಿಟಿಯ ಸಚಿಂದ್ರ ಹೆಗ್ಡೆ, ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಡಿ ನಾಗರಾಜ ಪಟ್ಟಣ ಪಂಚಾಯಿತಿ ಎಲ್ಲಾ ಗೌರವಾನ್ವಿತ ಪಟ್ಟಣ ಪಂಚಾಯತಿಯ ಸದಸ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಆಳ್ವಾಸ್ ಸಂಸ್ಥೆಯ 300ಕ್ಕಿಂತ ಅಧಿಕ ವಿದ್ಯಾರ್ಥಿ ವಿದ್ಯಾರ್ಥಿನಿಯರು ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮವನ್ನು ನಡೆಸಿಕೊಳ್ಳಲಿದ್ದು ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೋರಲಾಗಿದೆ.
ತೀರ್ಥಹಳ್ಳಿ ಸಾಧಕರಿಗೆ ಸನ್ಮಾನ
ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ರಾಜ್ಯೋತ್ಸವದಲ್ಲಿ ಸನ್ಮಾನ ಸ್ವೀಕರಿಸಲಿರುವ ತೀರ್ಥಹಳ್ಳಿಯ ಮೂಲದ ರಾಜ್ಯದ ಪ್ರಮುಖ ಅಧಿಕಾರಿಗಳು.
ಲೋಕನಾಥ್ (ಉಪಕುಲಪತಿಗಳು ಮೈಸೂರು ವಿಶ್ವವಿದ್ಯಾನಿಲಯ ಮೈಸೂರು)
ಶ್ರೀಧರ್ (ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಬೆಂಗಳೂರು ), ಡಾ.ಮುರಳಿ
(ಪೌರಾಡಳಿತ ಸಚಿವರ ಆಪ್ತ ಕಾರ್ಯದರ್ಶ ಬೆಂಗಳೂರು ), ಆಶಾ ಹೆಗಡೆ( ವಿರೋಧ ಪಕ್ಷದ ಪ್ರತಿಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ ಬೆಂಗಳೂರು )