ಮಣಿಪಾಲ್ ಆರೋಗ್ಯ ಕಾರ್ಡ್ 2024ರ ನೋಂದಣಿ ಶುರು
* ಇಡೀ ಕುಟುಂಬಕ್ಕೆ ಗುಣಮಟ್ಟದ ಆರೋಗ್ಯ ಸೇವೆ
* ರಿಯಾಯಿತಿಗಳು ಮತ್ತು ನೋಂದಣಿ ಕ್ರಮ ಹೇಗಿದೆ?
* ತೀರ್ಥಹಳ್ಳಿಯಲ್ಲಿ 20,000ಕ್ಕೂ ಅಧಿಕ ಸದಸ್ಯರ ನೋಂದಣಿ
NAMMUR EXPRESS NEWS
ತೀರ್ಥಹಳ್ಳಿ: ಮಣಿಪಾಲ್ ಆರೋಗ್ಯ ಕಾರ್ಡ್ 2024ರ ನೋಂದಣಿಯು ಆರಂಭವಾಗಿದೆ.
ತೀರ್ಥಹಳ್ಳಿಯ ಮಕ್ಕಿಮನೆ ಮೆಡಿಕಲ್ ಪ್ರಶಾಂತ್ ಅವರು ಈ ಬಗ್ಗೆ ಮಾಹಿತಿ ನೀಡಿದರು. ಅ. 4, 2024 ಭಾರತೀಯ ಆರೋಗ್ಯ ವ್ಯವಸ್ಥೆಯು ದೂರದರ್ಶಿತ್ವದ ನಾಯಕ ಡಾ. ಟಿ.ಎಂ.ಏ. ಪ್ರೈ, ಅವರ ಸಮರ್ಪಣೆಯಲ್ಲಿ,ಗುಣಮಟ್ಟದ ಆರೋಗ್ಯ ಸೇವೆಯನ್ನು ಕೈಗೆಟಕುವಂತೆ ಮಾಡುವುದು ಈ ಕಾರ್ಡ್ ಉದ್ದೇಶವಾಗಿದೆ. ಉಚಿತ ಆರೋಗ್ಯ ಸೇವೆಯನ್ನು ನೀಡುವುದು ಸವಾಲಿನವಾಗಿದ್ದರೂ, ಈ ಉಪಕ್ರಮವು ರಿಯಾಯಿತಿ ವೆಚ್ಚದಲ್ಲಿ, ಆರೋಗ್ಯ ಸೇವೆಯನ್ನು ಖಚಿತಪಡಿಸುತ್ತದೆ.2023 ರಲ್ಲಿ 360,000 ಹಾಗೂ ತೀರ್ಥಹಳ್ಳಿಯಲ್ಲಿ 20,000ಕ್ಕೂ ಅಧಿಕ ಸದಸ್ಯರು ನೋಂದಾಯಿಸಿಕೊಂಡಿದ್ದಾರೆ.
* ರಿಯಾಯಿತಿಗಳು ಮತ್ತು ನೋಂದಣಿ ಕ್ರಮ ಹೇಗಿದೆ?
ಮಣಿಪಾಲ್ ಆರೋಗ್ಯ ಕಾರ್ಡ್ರರು ತಜ್ಞ ಮತ್ತು ಸೂವರ್ ಸ್ಪೆಷಲಿಸ್ಟ್ ವೈದ್ಯರೊಂದಿಗೆ ಸಮಾಲೋಚನೆ ಶುಲ್ಕದಲಿ 50% ರಿಯಾಯಿತಿ, ರೋಗನಿರ್ಣಯ ಮತ್ತು ಪ್ರಯೋಗಾಲಯ ಪರೀಕ್ಷೆ ಸೇವೆಯಲ್ಲಿ, 25% ರಿಯಾಯಿತಿ, ರೇಡಿಯಾಲಜಿ ಹೊರರೋಗಿ ಕಾರ್ಯವಿಧಾನಗಳು ಮತ್ತು ಮಧುಮೇಹ ಪಾದದ ಆರೈಕೆಯಲ್ಲಿ 20% ರಿಯಾಯಿತಿ, ಡಯಾಲಿಸಿಸ್ನಲಿ 100 ರಿಯಾಯಿತಿ ಆಸ್ಪತ್ರೆಯ ಔಷಧಿಗಳ ಮೇಲೆ 10% ವರೆಗೆ ರಿಯಾಯಿತಿ ಮತ್ತು ಜನರಲ್ ವಾರ್ಡ್ ನಲ್ಲಿ ಒಳರೋಗಿಗಳ ಬಿಲ್ಗಳಲ್ಲಿ 25% ರಿಯಾಯಿತಿ ಸೌಲಭ್ಯವಿದೆ.
ಪತ್ರಿಕಾಗೋಷ್ಠಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವ್ಯವಸ್ಥಾಪಕರಾದ ಮೋಹನ್ ಶೆಟ್ಟಿ, ಸಹಾಯಕ ವ್ಯವಸ್ಥಾಪಕರಾದ ಪ್ರವೀಣ್, ಪ್ರಶಾಂತ್ ಮಕ್ಕಿಮನೆ ಉಪಸ್ಥಿತರಿದ್ದರು
2024ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ.
ತೀರ್ಥಹಳ್ಳಿ: ಪ್ರಶಾಂತ್ ಮಕ್ಕಿಮನೆ :9972283347
ಅಧಿಕೃತ ಪ್ರತಿನಿಧಿಗಳ ಮೂಲಕ ನೋಂದಣಿ ಮಾಡಬಹುದು.