Categories
ತೀರ್ಥಹಳ್ಳಿ

ಸಹ್ಯಾದ್ರಿ ಪಿ.ಯು ಕಾಲೇಜಿಗೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಗೌರವ

ಸಹ್ಯಾದ್ರಿ ಪಿ.ಯು ಕಾಲೇಜಿಗೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಗೌರವ
– ಗುಣಾತ್ಮಕ ಶಿಕ್ಷಣದೊಂದಿಗೆ ಸತತ ಶೇಕಡ 100% ಫಲಿತಾಂಶ
– ಜಿಲ್ಲೆಯಲ್ಲೇ ಅತ್ಯುತ್ತಮ ಸಾಧನೆ ಮಾಡಿದ ಪಿ.ಯು ಕಾಲೇಜು ಎಂಬ ಹೆಗ್ಗಳಿಕೆಯ ಸ್ಥಾನ

NAMMUR EXPRESS NEWS
ತೀರ್ಥಹಳ್ಳಿ: ಗುಣಾತ್ಮಕ ಶಿಕ್ಷಣದೊಂದಿಗೆ ಸತತ ಶೇಕಡ 100% ಫಲಿತಾಂಶ ಪಡೆದ ಸಹ್ಯಾದ್ರಿ ಪಿ.ಯು ಕಾಲೇಜಿಗೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಗೌರವ ಸಮರ್ಪಣೆ ಮಾಡಲಾಯಿತು.
ಶಿವಮೊಗ್ಗದ ಉಪನಿರ್ದೇಶಕರ ಕಛೇರಿಯ ಸಭಾಂಗಣದಲ್ಲಿ ನಡೆದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಭೆಯಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಇವರ ಸಹಯೋಗದೊಂದಿಗೆ ಆಯೋಜಿಸಿದ ಶೇಕಡಾ 100% ಫಲಿತಾಂಶ ಪಡೆದ ಪದವಿ ಪೂರ್ವ ಕಾಲೇಜುಗಳ ಅಭಿನಂದನಾ ಕಾರ್ಯಕ್ರಮದಲ್ಲಿ 2023 ಮತ್ತು 2025 ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿ.ಯು ವಾರ್ಷಿಕ ಪರೀಕ್ಷೆಯಲ್ಲಿ ಸತತವಾಗಿ ಶೇ.100% ರ ಫಲಿತಾಂಶ ಪಡೆಯುವ ಮೂಲಕ ಗುಣಾತ್ಮಕ ಫಲಿತಾಂಶದೊಂದಿಗೆ ಜಿಲ್ಲೆಯಲ್ಲೇ ಅತ್ಯುತ್ತಮ ಸಾಧನೆ ಮಾಡಿದ ಪಿ.ಯು ಕಾಲೇಜು ಎಂಬ ಹೆಗ್ಗಳಿಕೆಗೆ ಮಾನ್ಯವಾಗಿರುವುದರಿಂದ ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರು ಮತ್ತು ಶಿಕ್ಷಕರನ್ನು ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿ ಗೌರವಿಸಲಾಯಿತು. ಕಾಲೇಜಿನ ಪರವಾಗಿ ಸಂಸ್ಥೆಯ ಪ್ರಾಂಶುಪಾಲರಾದ ಗುರುರಾಜ್ ಹೆಚ್ ಬಿ ಇವರಿಗೆ ಜಿಲ್ಲಾ ಉಪನಿರ್ದೇಶಕರಾದ ಚಂದ್ರಪ್ಪ ಎಸ್ ಗುಂಡುಪಲ್ಲಿ ಇವರು ಅಭಿನಂದಿಸಿ ಗೌರವಿಸಿದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.