ಪ್ರೇಕ್ಷಕನ ಮನಗೆದ್ದ ಶಾಖಾಹಾರಿ!
– ತೀರ್ಥಹಳ್ಳಿ ವೆಂಕಟೇಶ್ವರ ಸೇರಿ ಹಲವು ಚಿತ್ರಮಂದಿರಗಳಲ್ಲಿ ಬಿಡುಗಡೆ
– ತೀರ್ಥಹಳ್ಳಿಯ ಸುತ್ತಮುತ್ತ ಚಿತ್ರೀಕರಣ
– ತೀರ್ಥಹಳ್ಳಿ ಕಲಾವಿದ ಶಿವಕುಮಾರ್ ನಟನೆ
NAMMUR EXPRESS NEWS
ಶಿವಮೊಗ್ಗ: ಶಿವಮೊಗ್ಗದವರೇ ಪ್ರಮುಖವಾಗಿರುವ ಹೊಸ ಭರವಸೆ ಮೂಡಿಸಿರುವ ಶಾಖಾಹಾರಿ ಸಿನಿಮಾ ಫೆ.16ರಂದು ತೆರೆ ಕಂಡಿದ್ದು ಎಲ್ಲೆಡೆ ಉತ್ತಮ ಸ್ಪಂದನೆ ಸಿಕ್ಕಿದೆ. ಶಿವಮೊಗ್ಗದವರೇ ಆದ ಚಿತ್ರದ ನಿರ್ದೇಶಕ ಸಂದೀಪ್ ಸುಂಕದ್ ನಿರ್ದೇಶಕರಾಗಿರುವ ಸಿನಿಮಾ ತೀರ್ಥಹಳ್ಳಿ, ಮೇಳಿಗೆ ಸುತ್ತಮುತ್ತ ಶೂಟಿಂಗ್ ನಡೆದಿದೆ. ಶಿವಮೊಗ್ಗದವರೇ ಆದ ರಂಗ ಕಲಾವಿದ ಎಸ್.ಆರ್. ಗಿರೀಶ್ರವರ ನಾಟಕದ ತುಣುಕೊಂದನ್ನು ಇಟ್ಟುಕೊಂಡು ಅದನ್ನು ವಿಸ್ತರಿಸಿ ಅದಕ್ಕೊಂದು ರೂಪ ಕೊಟ್ಟು, ಕೌತುಕ ಸನ್ನಿವೇಶಗಳನ್ನು ಸೃಷ್ಠಿಸಿ ಶಿವಮೊಗ್ಗದ ತೀರ್ಥಹಳ್ಳಿ ಸುತ್ತಮುತ್ತ ಚಿತ್ರಿಕರಣ ಮಾಡಲಾಗಿದೆ.
ತೀರ್ಥಹಳ್ಳಿ ಕಲಾವಿದ ಶಿವಕುಮಾರ್ ನಟನೆ
ತೀರ್ಥಹಳ್ಳಿಯ ರಂಗಭೂಮಿ ಕಲಾವಿದರಾದ ಶಿವಕುಮಾರ್ ತೀರ್ಥಹಳ್ಳಿರವರು ಶಾಖಾಹಾರಿ ಚಿತ್ರದಲ್ಲಿ ನಟಿಸಿದ್ದಾರೆ. ತೀರ್ಥಹಳ್ಳಿ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಸಿನಿಮಾ ತೆರೆ ಕಂಡಿದೆ. ಶಿವಕುಮಾರ್ ಅವರು ನೀನಾಸಂನಲ್ಲಿ ತರಬೇತಿ ಮುಗಿಸಿ ಎರಡು ವರ್ಷ ನೀನಾಸಂ ತಿರುಗಾಟದಲ್ಲಿ ಕೆಲಸ ಮಾಡಿದ್ದಾರೆ
ಇಬ್ಬರು ನಿರ್ಮಾಪಕರು!
ರಂಗಾಯಣ ರಘು ಮತ್ತು ಗೋಪಾಲಕೃಷ್ಣ ದೇಶಪಾಂಡೆಯಂತವರು ಚಿತ್ರದಲ್ಲಿ ನಟಿಸಿದ್ದಾರೆ. ಸುಜಯ್ ಶಾಸ್ತ್ರಿ ಪ್ರತಿಮಾ ನಾಯಕ್, ಹರಿಣಿ, ವಿನಯ್, ಶ್ರೀಹರ್ಷಗೋಭಟ್ಟ, ನಿಧಿಹೆಗಡೆ ಮುಂತಾದವರು ಅಭಿನಯಿಸಿದ್ದಾರೆ ಎಂದರು. ರಾಜೇಶ್ ಕೀಳಂಬಿ, ರಂಜಿನಿ ಪ್ರಸನ್ನ ನಿರ್ಮಾಪಕರಾಗಿದ್ದಾರೆ.ಕೀಳಂಬಿ ಮೀಡಿಯಾ ಲ್ಯಾಬ್ ಪ್ರೈ.ಲಿ. ನ ಅಡಿಯಲ್ಲಿ ಶಾಖಾಹಾರಿ ಚಿತ್ರವನ್ನು ನಿರ್ಮಿಸಿದ್ದಾರೆ. ಕೆ ಆರ್ ಜಿ ಸಂಸ್ಥೆ ಚಿತ್ರ ವಿತರಣೆಯ ಜವಾಬ್ದಾರಿಯನ್ನು ಹೊಂದಿದೆ.