ತೀರ್ಥಹಳ್ಳಿ ಹುಡುಗರ ಕ್ರೀಡಾ ಸಾಧನೆಗೆ ಸಲಾಂ!
– ಕಬ್ಬಡಿಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಾಗ್ಗೇವಿ ಕಾಲೇಜು ವಿದ್ಯಾರ್ಥಿಗಳು
– ರಾಜ್ಯ ಮಟ್ಟಕ್ಕೆ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಇಂದಿರಾ ನಗರ ಶಾಲೆಯ ವಿದ್ಯಾರ್ಥಿಗಳು
NAMMUR EXPRESS NEWS
ತೀರ್ಥಹಳ್ಳಿ: ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ತೀರ್ಥಹಳ್ಳಿ ವಾಗ್ಗೇವಿ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಪ್ರದರ್ಶನ ನೀಡುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಗಾಗಲೇ ಶಿಕ್ಷಣ ಸಾಧನೆ ಮಾಡಿರುವ ವಾಗ್ಗೇವಿ ಕಾಲೇಜು ಕ್ರೀಡಾ ಕ್ಷೇತ್ರದಲ್ಲಿ ಕೂಡ ಮಿಂಚುತ್ತಿದೆ.
ಶಿವಮೊಗ್ಗ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಈ ಅದ್ಭುತ ಸಾಧನೆಗೈದ ಮಕ್ಕಳಿಗೆ ವಾಗ್ಗೇವಿ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ, ಪೋಷಕರು ಹಾಗೂ ತಾಲೂಕು, ಜಿಲ್ಲಾ ಜನತೆ ಹರಸಿ ಹಾರೈಸಿದ್ದಾರೆ.
ರಾಜ್ಯ ಮಟ್ಟಕ್ಕೆ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು
ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಕಬ್ಸ್, ಬುಲ್ ಬುಲ್, ಸ್ಕೌಟ್ಸ್ ಮತ್ತು ಗೈಡ್ ವಿದ್ಯಾರ್ಥಿಗಳು ದಿನಾಂಕ 30-8-2025 25 ರಂದು ನಡೆದ ತಾಲೂಕು ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅದರಲ್ಲಿ ಕಬ್ಸ್, ಬುಲ್ ಬುಲ್ ಮತ್ತು ಸ್ಕೌಟ್ ವಿದ್ಯಾರ್ಥಿಗಳು ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದರು. ಈ ವಿದ್ಯಾರ್ಥಿಗಳಿಗೆ ದಿನಾಂಕ :21-9-2025 ರಂದು ಜಿಲ್ಲಾ ಸ್ಕೌಟ್ ಭವನದಲ್ಲಿ ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಇದರಲ್ಲಿ ಸ್ಕೌಟ್ ತಂಡ ಪ್ರಥಮ ಸ್ಥಾನ ಮತ್ತು ಕಬ್ಸ್ ತಂಡವು ತೃತೀಯ ಸ್ಥಾನ ಪಡೆದಿರುತ್ತಾರೆ. ಪ್ರಥಮ ಸ್ಥಾನ ಪಡೆದ ಸ್ಕೌಟ್ಸ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುವುದು ಸಂತಸದ ಕ್ಷಣವಾಗಿದೆ. ಈ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ರಾಜ್ಯಮಟ್ಟದ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.








