Categories
ತೀರ್ಥಹಳ್ಳಿ

ವಾಗ್ದೇವಿ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್

ವಾಗ್ದೇವಿ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್
– ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಿಷ್ಯವೇತನ
– ಕಾಲೇಜಲ್ಲಿ ಅತ್ಯುತ್ತಮ ಶಿಕ್ಷಣಕ್ಕೆ ಅವಕಾಶ

NAMMUR EXPRESS NEWS
ಮಲೆನಾಡಿನ ಶಿಕ್ಷಣ ಕ್ರಾಂತಿಗೆ ಕಾರಣವಾದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಸತ್ಪಥ ಎಜುಕೇಷನ್ ಟ್ರಸ್ಟ್ ನ ಅಂಗವಾದ ವಾಗ್ದೇವಿ ಪದವಿಪೂರ್ವ ಕಾಲೇಜಿನಲ್ಲಿ ಓದಲು ಈಗ ಸುವರ್ಣಾವಕಾಶ. ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದು, ಉತ್ತಮ ಕಾಲೇಜನ್ನು ಸೇರಿ ಅದ್ಭುತ ಜೀವನವನ್ನು ಕಟ್ಟಿಕೊಳ್ಳಬೇಕು ಎನ್ನುವುದು ಪ್ರತಿಯೊಂದು ವಿದ್ಯಾರ್ಥಿಗಳ ಕನಸಾಗಿರುತ್ತದೆ. ಇದನ್ನು ನನಸಾಗಿಸುವ ಉದ್ದೇಶದಿಂದ ಹಾಗು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಪ್ರೋತ್ಸಾಹಿಸುವ ಕಾರಣದಿಂದ 2024-25 ನೆಯ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ಪಿ.ಯು.ಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಕ್ಕೆ ದಾಖಲಾತಿಯನ್ನು ಪಡೆಯುವ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ನೀಡಲಿದೆ.

ಶಿಷ್ಯವೇತನವು ಯಾರಿಗೆ ಇಷ್ಟೆಷ್ಟು ಸಿಗಲಿದೆ?

ಶೇಕಡಾ 100 ಅಂಕಗಳನ್ನು ಗಳಿಸಿದ್ದರೆ – ಸಂಪೂರ್ಣ ಉಚಿತ ಶಿಕ್ಷಣ ಇದರ ಜೊತೆ
ಶೇಕಡಾ 98 ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ್ದರೆ – 75 ಶೇಕಡಾ ಶಿಷ್ಯವೇತನ,
ಶೇಕಡಾ 95 ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ್ದರೆ – 50 ಶೇಕಡಾ ಶಿಷ್ಯವೇತನ,
ಶೇಕಡಾ 90 ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ್ದರೆ – 25 ಶೇಕಡಾ ಶಿಷ್ಯವೇತನ ವನ್ನು

ಪಡೆದು ತಾವು ಅಂದುಕೊಂಡ ಗುರಿಯನ್ನು ಸಾಧಿಸಬಹುದಾಗಿದೆ. ಇದಲ್ಲದೆ ಈ ಕಾಲೇಜನಲ್ಲಿ ಸಿ.ಇ.ಟಿ, ನೀಟ್, ಜೆ.ಇ.ಇ, ಸಿ.ಎ ,ಸಿ.ಪಿ.ಟಿ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನುರಿತ ಉಪನ್ಯಾಸಕರಿಂದ ವಿಶೇಷ ತರಗತಿಗಳನ್ನು ನೀಡುತ್ತಾರೆ. ಇದರ ಸದುಪಯೋಗವನ್ನು ಪಡೆದುಕೊಳ್ಳುವ, ಉಜ್ವಲ ಭವಿಷ್ಯವನ್ನು ಹೊಂದಿರುವ ವಿದ್ಯಾರ್ಥಿಗಳನ್ನು ವಾಗ್ದೇವಿ ಶಿಕ್ಷಣ ಸಂಸ್ಥೆ ಸ್ವಾಗತಿಸುತ್ತಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.