ಕಟ್ಟೆಹಕ್ಕಲು ಶಾಲೆಯ ಅಮೃತ ಯೋಗಾಸನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
– ಪ್ರಥಮ ಸ್ಥಾನವನ್ನು ಪಡೆದು ಆಯ್ಕೆ ಆಗಿರುವುದು ಹೆಮ್ಮೆ
NAMMUR EXPRESS NEWS
ಸರ್ಕಾರಿ ಪ್ರೌಢಶಾಲೆ ಮೇಳಿಗೆಯಲ್ಲಿ ನಡೆದ ತಾಲ್ಲೂಕು ಮಟ್ಟದ U-17 ಯೋಗಾಸನ ಸ್ಪರ್ಧೆ ಯಲ್ಲಿ ಸರ್ಕಾರಿ ಪ್ರೌಢಶಾಲೆ ಕಟ್ಟೆಹಕ್ಕಲು ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಅಮೃತ ಹೆಚ್.ಡಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ.
ಕಟ್ಟೆಹಕ್ಕಲು ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದಾಳೆ ಯೋಗಾಸನ ಸ್ಪರ್ಧೆಯಲ್ಲಿ ಮೊದಲ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಅಮೃತ ಇವಳ ಈ ಸಾಧನೆಗೆ ಮತ್ತು ಸಹಕರಿಸಿದ ಪೋಷಕರಿಗೆ, ತರಬೇತಿ ನೀಡಿದ ದೈಹಿಕ ಶಿಕ್ಷಕರಿಗೆ ಶಾಲಾ ಎಸ್.ಡಿ.ಎಂ.ಸಿ, ಮುಖ್ಯೋಪಾಧ್ಯಾಯರು, ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.
