ರಾಜಧಾನಿಯಲ್ಲಿ ಸೇವಾ ಭಾರತಿ ಹಿರಿಯ ಪ್ರಾಥಮಿಕ ಶಾಲೆ ಸ್ನೇಹ ಸಮ್ಮಿಲನ
– ಶಾಲೆಯ ನೆನಪು ಮಾಡಿಕೊಂಡ ಹಿರಿಯ ವಿದ್ಯಾರ್ಥಿಗಳು
– ರಾಜ್ಯದ ಮೂಲೆ ಮೂಲೆಯಲ್ಲಿರುವ ಹಳೆಯ ವಿದ್ಯಾರ್ಥಿಗಳು ಹಾಜರ್
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ತೀರ್ಥಹಳ್ಳಿ: ತೀರ್ಥಹಳ್ಳಿಯ ಸೇವಾ ಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ನೇಹ ಸಮ್ಮಿಲನ ರಾಜಧಾನಿ ಬೆಂಗಳೂರಲ್ಲಿ ಸಂಭ್ರಮದಿಂದ ನಡೆಯಿತು. ಹಳೆಯ ವಿದ್ಯಾರ್ಥಿಗಳು ತಾವು ಓದಿದ ಶಾಲೆಯಲ್ಲಿ ಕಾರ್ಯಕ್ರಮ ಮಾಡಿ ಅಕ್ಷರ ಕಳಿಸಿದ ಗುರುಗಳಿಗೆ ಗೌರವ ಸಲ್ಲಿಸಿದರು. ಇದೇ ವೇಳೆ ಮುಕುಂದ ಮಾಸ್ಟರ್ ಜಿ, ಭಾಗ್ಯ ಮಾತಾಜಿ, ಶಾಂತಲ ಮಾಯಿ ಮಾತಾಜಿ, ಮಹೇಶ್ ಮಾಸ್ಟರ್ ಜಿ ಹಾಗು ಸುಧಾ ಅವರನ್ನು ಸನ್ಮಾನಿಸಲಾಯಿತು.
ಬೆಂಗಳೂರಿನ ಕಬ್ಬನ್ ಪಾರ್ಕ್ ಸರ್ಕಾರಿ ನೌಕರರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಮೂಲೆ ಮೂಲೆಯಲ್ಲಿ ಇರುವ ಹಳೆಯ ವಿದ್ಯಾರ್ಥಿಗಳು ಭಾಗಿಯಾಗಿದ್ದರು.ತೀರ್ಥಹಳ್ಳಿ ಹೆಮ್ಮೆಯ ಶಿಕ್ಷಣ ಸಂಸ್ಥೆ ಸೇವಾ ಭಾರತಿ ಹಿರಿಯ ಪ್ರಾಥಮಿಕ ಶಾಲೆ ಸ್ನೇಹ ಸಮ್ಮಿಲನದಲ್ಲಿ ಅನೇಕ ಬ್ಯಾಚ್ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ನಟ ದಿಗಂತ್ ಇದೇ ಶಾಲೆಯ ವಿದ್ಯಾರ್ಥಿ ಆಗಿದ್ದು ಶುಭಾಶಯಕೋರಿದರು. ಶಿಕ್ಷಣ ತಜ್ಞ, ತ್ರಿಷಾ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ , ಹಿರಿಯ ವಿದ್ಯಾರ್ಥಿ ಸಿ. ಎ. ಗೋಪಾಲ ಕೃಷ್ಣ ಭಟ್ ಸೇರಿ ಅನೇಕರು ಭಾಗಿಯಾಗಿದ್ದರು.








