Categories
ತೀರ್ಥಹಳ್ಳಿ

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್: ನಾಲ್ವರಿಗೆ ನೋಟಿಸ್!

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್: ನಾಲ್ವರಿಗೆ ನೋಟಿಸ್!
– ತೀರ್ಥಹಳ್ಳಿ ಮೂಲದ ನಾಲ್ವರಿಗೆ ಎನ್‌ಐಎ ನೋಟಿಸ್
– ತನಿಖೆ ಚುರುಕು: ಮತ್ತಷ್ಟು ಮಂದಿ ವಿಚಾರಣೆ ಸಾಧ್ಯತೆ

NAMMUR EXPRESS NEWS
ತೀರ್ಥಹಳ್ಳಿ: ಶಿವಮೊಗ್ಗ, ಕರಾವಳಿ ಉಗ್ರ ಚಟುವಟಿಕೆ ಮೇಲೆ ಕಣ್ಣಿಟ್ಟು ಭಾರೀ ತನಿಖೆ ನಡೆಸುತ್ತಿರುವ ಎನ್‌ಐಎ ಇದೀಗ ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಹಾಗೂ ದೇಶದ ತ್ರಿವರ್ಣ ಧ್ವಜ ಸುಟ್ಟ ಪ್ರಕರಣ ಸಂಬಂಧ ತೀರ್ಥಹಳ್ಳಿ ಮೂಲದ ನಾಲ್ವರಿಗೆ ನೋಟಿಸ್ ನೀಡಿದೆ. ಪ್ರಕರಣಗಳ ತನಿಖೆ ಚುರುಕುಗೊಳಿಸಿರುವ ಎನ್‌ಐಎ ತಂಡ ಇದೀಗ ತನಿಖೆ ಸಲುವಾಗಿ ಬೆಂಗಳೂರು ಕಚೇರಿಗೆ ಬರುವಂತೆ ನಾಲ್ಕು ಜನರಿಗೆ ನೋಟಿಸ್ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ತೀರ್ಥಹಳ್ಳಿಯ ಶಂಕಿತ ಉಗ್ರ ಅರಫತ್ ಅಲಿ ಬಂಧನದ ಬೆನ್ನಲ್ಲೇ ತನಿಖೆ ಮತ್ತಷ್ಟು ಚುರುಕುಗೊಳಿಸಿರುವ ಎನ್‌ಐಎ ತಂಡ ತೀರ್ಥಹಳ್ಳಿ ಮೂಲದ ಶಂಸುದ್ದೀನ್, ರಿಜ್ವಾನ್, ನಜೀಬ್ ವುಲ್ಲಾ ಹಾಗೂ ತಮೀಮ್ ಎಂಬ ನಾಲ್ವರಿಗೆ ನೋಟಿಸ್ ನೀಡಿದ್ದಾರೆ.

ಅಕ್ಟೋಬರ್ 19ರ ಮಧ್ಯಾಹ್ನ 1 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದು ಅರಫತ್ ಅಲಿ ಜೊತೆಗೆ ನಿಕಟ ಸಂಬಂಧ ಹೊಂದಿದವರ ಮೇಲೆ ನಿಗಾ ಇಡಲಾಗಿದೆ. ಎಲ್ಲಾ ಆಯಾಮಗಳಲ್ಲೂ ಎನ್‌ಐಎ ತಂಡ ತನಿಖೆ ನಡೆಸುತ್ತಿದ್ದು ಅರಫತ್ ಅಲಿ ಮೊಬೈಲ್ ಡೇಟಾ ಆಧರಿಸಿ ತೀರ್ಥಹಳ್ಳಿಗೆ ಬಂದು, ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ ನಲ್ಲಿ ಎನ್‌ಐಎ ಇನ್ನಷ್ಟು ಜನರನ್ನ ಬಂಧಿಸುವ ಸಾಧ್ಯತೆ ಇರಬಹುದು ಎನ್ನಲಾಗಿದೆ

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.