ತೀರ್ಥಹಳ್ಳಿಗೆ ಬರ್ತಾರೆ ಶಿವಣ್ಣ, ಗೀತಾ
– ಮಾ.24ರಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ
– ತೀರ್ಥಹಳ್ಳಿಯ ಕೆ.ಟಿ.ಕೆ. ಕಲ್ಯಾಣ ಮಂದಿರದಲ್ಲಿ ಆಯೋಜನೆ
– ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು
NAMMUR EXPRESS NEWS
ತೀರ್ಥಹಳ್ಳಿ: ಖ್ಯಾತ ನಟ ಶಿವರಾಜ್ ಕುಮಾರ್ ಹಾಗೂ ಶಿವಮೊಗ್ಗ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮಾ.24 ರ ಭಾನುವಾರ, ಮಧ್ಯಾಹ್ನ 2:30 ಕ್ಕೆ ತೀರ್ಥಹಳ್ಳಿಗೆ ಆಗಮಿಸಲಿದ್ದಾರೆ. ತೀರ್ಥಹಳ್ಳಿ ಕುಶಾವತಿಯ ಕೆಟಿಕೆ ಕಲ್ಯಾಣ ಮಂದಿರದಲ್ಲಿ ಶಿವಮೊಗ್ಗ ಲೋಕಸಭಾ ಚುನಾವಣಾ ಪ್ರಯುಕ್ತ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯ ಕರ್ತರ ಸಭೆಯನ್ನು ಕರೆಯಲಾಗಿದ್ದು ಈ ಸಭೆಯಲ್ಲಿ ಲೋಕಸಭಾ ಅಭ್ಯರ್ಥಿಯವರಾದ ಶ್ರೀಮತಿ ಗೀತಾ ಶಿವರಾಜಕುಮಾರ್, ಖ್ಯಾತ ಚಲನಚಿತ್ರ ನಟರು ಸಮಾಜ ಸೇವಕರು ಕರುನಾಡ ಚಕ್ರವರ್ತಿ ಶಿವರಾಜ ಕುಮಾರ್,
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದಂತಹ ಎಸ್. ಮಧು ಬಂಗಾರಪ್ಪ, ಮಾಜಿ ಶಿಕ್ಷಣ ಸಚಿವರಾದಂತಹ ಕಿಮ್ಮನೆ ರತ್ನಾಕರ್, ಎಂಎಡಿಬಿ ಅಧ್ಯಕ್ಷರಾದ ಆರ್.ಎಂ. ಮಂಜುನಾಥ ಗೌಡರು, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ಎಸ್. ಸುಂದರೇಶ್ ಹಾಗೂ ರಾಜ್ಯ – ಜಿಲ್ಲಾ ಮಟ್ಟದ ಕಾಂಗ್ರೆಸ್ ಮುಖಂಡರುಗಳು, ಕ್ಷೇತ್ರ ಕಾಂಗ್ರೆಸ್ ಪಕ್ಷದ ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಭಾಗವಹಿಸುತ್ತಿದ್ದು ಕಾರ್ಯಕರ್ತರು, ಅಭಿಮಾನಿ ಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಪ್ರದೇಶಕಾಂಗ್ರೆಸ್ ಸಮಿತಿ ವತಿಯಿಂದ ವಿನಂತಿಸಲಾಗಿದೆ.