ತೀರ್ಥಹಳ್ಳಿಗೆ ಆಗಮಿಸಿದ ಶಿವಣ್ಣ!
– ರಾಮೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿ ಕಾರ್ಯಕರ್ತರ ಸಭೆಯಲ್ಲಿ ಹಾಜರ್
– ಕಾರ್ಯಕ್ರಮದಲ್ಲಿ ಗಮನ ಸೆಳೆದ ಶಿವಣ್ಣ!
NAMMUR EXPRESS NEWS
ತೀರ್ಥಹಳ್ಳಿ: ಶಿವಮೊಗ್ಗ ಲೋಕ ಸಭಾ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮತ್ತು ಅವರ ಪತಿ, ನಟ ಶಿವರಾಜ್ ಕುಮಾರ್ ತೀರ್ಥಹಳ್ಳಿಗೆ ಆಗಮಿಸಿ ಕಾರ್ಯಕರ್ತರಿಗೆ ಜೋಶ್ ತುಂಬಿದರು. ಶಿವಮೊಗ್ಗದಿಂದ ಸಂತೆಕಡೂರಿಂದ ಶುರುವಾದ ಕಾರ್ಯಕರ್ತರ ಸಭೆಯು ಬೆಜ್ಜವಳ್ಳಿಯಿಂದ ಬೈಕ್ ಮೆರವಣಿಗೆ ಮೂಲಕ ತೀರ್ಥಹಳ್ಳಿಗೆ ಆಗಮಿಸಿ ಅಲ್ಲಿಂದ ರಾಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು. ಬಳಿಕ ಕೆಟಿಕೆ ಕಲ್ಯಾಣ ಮಂದಿರದಲ್ಲಿ ನಡೆದ ಕಾರ್ಯಕರ್ತರ್ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸುಂದರೇಶ್ ಅಧ್ಯಕ್ಷತೆ ವಹಿಸಿದ್ದರು.
ಸಚಿವ ಮಧು ಬಂಗಾರಪ್ಪ, ಕಾಂಗ್ರೆಸ್ ನಾಯಕರಾದ ಕಿಮ್ಮನೆ ರತ್ನಾಕರ್, ಡಾ. ಆರ್. ಎಂ. ಮಂಜುನಾಥ ಗೌಡ, ಬೇಳೂರು ಗೋಪಾಲಕೃಷ್ಣ, ದಿನೇಶ್, ಪ್ರಸನ್ನ ಕುಮಾರ್, ಆಯನೂರು ಮಂಜುನಾಥ್, ಕಲಗೋಡು ರತ್ನಾಕರ್, ಮುಡುಬ ರಾಘವೇಂದ್ರ, ನಾರಾಯಣ ರಾವ್, ಕೆಸ್ತೂರು ಮಂಜುನಾಥ್, ಪುಟ್ಟೋಡ್ಲು ರಾಘವೇಂದ್ರ, ಅಮರನಾಥ ಶೆಟ್ಟಿ ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರು, ಮುಖಂಡರು, ಕಾರ್ಯಕರ್ತರು ಇದ್ದರು.