Categories
ತೀರ್ಥಹಳ್ಳಿ

ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ರಜತ!

ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ರಜತ!
– ತೀರ್ಥಹಳ್ಳಿ ಹುಡುಗಿ ಯೋಗಾಸನದಲ್ಲಿ ಆರನೇ ಸ್ಥಾನ
– ಡಿ.1ಕ್ಕೆ ತೀರ್ಥಹಳ್ಳಿಯಲ್ಲಿ ಅದ್ದೂರಿ ಸ್ವಾಗತ
– ಮಲೆನಾಡ ಸಾಧಕಿ ರಜತಗೆ ಅಭಿನಂದನೆಗಳು

NAMMUR EXPRESS NEWS
ತೀರ್ಥಹಳ್ಳಿ: ಸರ್ಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ 10ನೇ ತರಗತಿಯಲ್ಲಿ ಓದುತ್ತಿರುವ ರಜತ ಡಿ. ತ್ರಿಪುರಾ ರಾಜ್ಯದ ಅಗರ್ತಲಾದಲ್ಲಿ ನ.22ರಿಂದ 27ರವರೆಗೆ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ನಡೆದ ರಾಷ್ಟ್ರಮಟ್ಟದ ಯೋಗಾಸನದಲ್ಲಿ ಭಾಗವಹಿಸಿ ಆರನೇ ಸ್ಥಾನ ಪಡೆದು ಸಾಧನೆ ಮಾಡಿದ್ದಾಳೆ. ಡಿಸೆಂಬರ್ 1ರಂದು ತೀರ್ಥಹಳ್ಳಿ ನಗರಕ್ಕೆ ಆಗಮಿಸುತ್ತಿರುವ ಈ ವಿದ್ಯಾರ್ಥಿನಿಯನ್ನು ತೀರ್ಥಹಳ್ಳಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲೂಕು ದೈಹಿಕ ಪರಿವೀಕ್ಷಕರು, ಶಾಲೆಯ ಉಪಪ್ರಾಂಶುಪಾಲರು, ಶಿಕ್ಷಕರು, ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸದಸ್ಯರು ಹಾಗೂ ಶಾಲೆಯ ಎಲ್ಲಾ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ಸಾಧನೆಯ ಹಾದಿಯಲ್ಲಿ ರಜತ

ವಿದ್ಯಾರ್ಥಿನಿಯು 2022 – 23ನೇ ಸಾಲಿನ SGFI ಯೋಗಾಸನದಲ್ಲಿಯೂ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು ಆ ಸಾಲಿನಲ್ಲಿ ರಾಷ್ಟ್ರ ಮಟ್ಟದ ಸ್ಪರ್ಧೆಗಳು ನಡೆದಿರಲಿಲ್ಲ, ಇದೇ ಸಾಲಿನಲ್ಲಿ ರಾಷ್ಟ್ರಮಟ್ಟದ ಯೋಗ ಒಲಂಪಿಯಾಡ್ ನಲ್ಲಿಯೂ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿರುವುದು ಹೆಮ್ಮೆಯ ವಿಷಯ. ಎಡಗೈ ಮತ್ತು ಬಲಗೈ ಎರಡು ಕೈಗಳಲ್ಲಿಯು ಸುಲಲಿತವಾಗಿ ಬರೆಯಬಲ್ಲ ಈ ವಿದ್ಯಾರ್ಥಿನಿಯು ಶೈಕ್ಷಣಿಕವಾಗಿಯೂ ಉತ್ತಮ ಫಲಿತಾಂಶ ಪಡೆಯುವಂತಾಗಲಿ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.