Categories
ತೀರ್ಥಹಳ್ಳಿ

ತೀರ್ಥಹಳ್ಳಿಯ ಸಿಂಗನಬಿದಿರೆ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ!

ತೀರ್ಥಹಳ್ಳಿಯ ಸಿಂಗನಬಿದಿರೆ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ!
– 2022- 23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ
– ಗ್ರಾಮ ಪಂಚಾಯತ್ ಅಧ್ಯಕ್ಷ ನವೀನ್ ಕುಳ್ಳು0ಡೆ ಮತ್ತು ಸದಸ್ಯರ ಅಭಿನಂದನೆ

NAMMUR EXPRESS NEWS
ತೀರ್ಥಹಳ್ಳಿ: ರಾಜ್ಯದಲ್ಲಿ 2022-23ರ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ರಾಜ್ಯದ 233 ಗ್ರಾಮ ಪಂಚಾಯತ್‌ಗಳು ಆಯ್ಕೆಯಾಗಿವೆ. ನಾಲ್ಕು ಗ್ರಾಮಗಳಿಗೆ ವಿಶೇಷ ಗಾಂಧಿ ಗ್ರಾಮ ಪುರಸ್ಕಾರ ಸಂದಿದೆ. ಪ್ರತೀ ತಾಲೂಕಿನ ಒಂದೊಂದು ಗ್ರಾಮವನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪರಿಗಣಿಸಲಾಗಿದೆ. ಸರ್ಕಾರದ ಅಪಾರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ದಿನಾಂಕ :25-09-2023 ರಂದು ನಡೆದ 2022-23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಗ್ರಾಮ ಪಂಚಾಯಿತಿಗಳ ಆಯ್ಕೆಯನ್ನಅಂತಿಮಗೊಳಿಸಲಾಗಿದ್ದು ತೀರ್ಥಹಳ್ಳಿ ತಾಲೂಕಿನಿಂದ ಸಿಂಗನಬಿದಿರೆ ಗ್ರಾಮ ಪಂಚಾಯಿತಿಗೆ ಬಂದಿದೆ.

ಸರಕಾರದ ಅಪರ ಮುಖ್ಯ ಕಾರ್ಯದರ್ಶಿ (ಪಂಚಾಯತ್‌ರಾಜ್) ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ಪರಾಮರ್ಶೆ ಸಮಿತಿ ಸಭೆಯಲ್ಲಿ ಆಯ್ಕೆಯನ್ನು ಅಂತಿಮಗೊಳಿಸಲಾಗಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಮಹಾತ್ಮ ಗಾಂಧಿ ಜನ್ಮದಿನವಾದ ಅಕ್ಟೋಬರ್ 2ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಳಗ್ಗೆ 10 ಗಂಟೆಯಿಂದ ನಡೆಯಲಿದೆ.
ಪ್ರಶಸ್ತಿ ಪುರಸ್ಕೃತ ಗ್ರಾಮಗಳ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಪಿಡಿಒ ಸೇರಿದಂತೆ ಅಧಿಕಾರಿಗಳು ಭಾಗಿಯಾಗಲಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪುರಸ್ಕರಿಸಲಿದ್ದಾರೆ.

ಸಿಂಗನಂಬಿದರೆ ಗ್ರಾಮ ಪಂಚಾಯತ್ ಮಾದರಿ

ಗಾಂಧಿ ಗ್ರಾಮ ಪುರಸ್ಕಾರಕ್ಕೆ ತೀರ್ಥಹಳ್ಳಿಯ 38 ಗ್ರಾಮ ಪಂಚಾಯಿತಿಗಳ ಪೈಕಿ ಸಿಂಗನಬಿದಿರೆ ಗ್ರಾಮ ಪಂಚಾಯತ್ ಆಯ್ಕೆ ಆಗಿದೆ. ಗ್ರಾಮ ಪಂಚಾಯತ್ ಅಧ್ಯಕ್ಷರಾದ ನವೀನ್ ಕುಳ್ಳು0ಡೆ, ಸುಜಾತ ಉಪಾಧ್ಯಕ್ಷರು, ಕುಸುಮ ಸದಸ್ಯರು, ತಿಮಪ್ಪ ಸದಸ್ಯರು, ಸದೇಶ ಸದಸ್ಯರು, ದಿವ್ಯ ಸದಸ್ಯರು ಗ್ರಾಮದ ಅಭಿವೃದ್ಧಿಗೆ ಕಾರಣರಾದ ಸಮಸ್ತ ಗ್ರಾಮಸ್ಥರು, ಅಧಿಕಾರಿಗಳು, ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.