ಗಾಂಧಿ ಗ್ರಾಮ ಪುರಸ್ಕಾರ ಸ್ವೀಕರಿಸಿದ ಸಿಂಗನಬಿದಿರೆ ಗ್ರಾಪಂ ಅಧ್ಯಕ್ಷ ನವೀನ್ ಮತ್ತು ತಂಡ!
– 2022- 23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ
– ಬೆಂಗಳೂರಲ್ಲಿ ಸಚಿವ ಪ್ರಿಯಾಂಕಾ ಖರ್ಗೆ ಅವರಿಂದ ಸ್ವೀಕಾರ
NAMMUR EXPRESS NEWS
ತೀರ್ಥಹಳ್ಳಿ: ರಾಜ್ಯದಲ್ಲಿ 2022-23ರ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ರಾಜ್ಯದ 233 ಗ್ರಾಮ ಪಂಚಾಯತ್‌ಗಳು ಆಯ್ಕೆಯಾಗಿದ್ದು ಗಾಂಧಿ ಜಯಂತಿಯಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣೆ ಮಾಡಲಾಯಿತು. ಪ್ರಶಸ್ತಿ ಪುರಸ್ಕೃತ ಗ್ರಾಮಗಳ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಪಿಡಿಒ ಸೇರಿದಂತೆ ಅಧಿಕಾರಿಗಳು ಭಾಗಿಯಾಗಲಿದ್ದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪುರಸ್ಕರಿಸಿದರು.
ಈ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ತೀರ್ಥಹಳ್ಳಿಯ 38 ಗ್ರಾಮ ಪಂಚಾಯಿತಿಗಳ ಪೈಕಿ ಸಿಂಗನಬಿದಿರೆ ಗ್ರಾಮ ಪಂಚಾಯತ್ ಆಯ್ಕೆ ಆಗಿದ್ದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ನವೀನ್ ಕುಳ್ಳು0ಡೆ, ಸುಜಾತ ಉಪಾಧ್ಯಕ್ಷರು, ಪಿಡಿಓ ಭಾಸ್ಕರ್ ಪ್ರಶಸ್ತಿ ಸ್ವೀಕರಿಸಿದರು. ಕುಸುಮ ಸದಸ್ಯರು, ತಿಮಪ್ಪ ಸದಸ್ಯರು, ಸದೇಶ ಸದಸ್ಯರು, ದಿವ್ಯ ಸದಸ್ಯರು ಅಧಿಕಾರಿಗಳು ಸಂತಸ ವ್ಯಕ್ತಪಡಿಸಿದ್ದಾರೆ.