Categories
ತೀರ್ಥಹಳ್ಳಿ

ಅಪೇಕ್ಷಾ ಟಿ ಎಂ ಅವರಿಗೆ ರಾಜ್ಯಮಟ್ಟದ ಪ್ರಶಸ್ತಿ

ಅಪೇಕ್ಷಾ ಟಿ ಎಂ ಅವರಿಗೆ ರಾಜ್ಯಮಟ್ಟದ ಪ್ರಶಸ್ತಿ
– ತೀರ್ಥಹಳ್ಳಿಯ ಸಹ್ಯಾದ್ರಿ ಶಾಲೆಯ ವಿದ್ಯಾರ್ಥಿನಿ
– ಎಸ್.ಎಸ್.ಎಲ್.ಸಿ ಕನ್ನಡದಲ್ಲಿ 125ಕ್ಕೆ 125 ಅಂಕ

NAMMUR EXPRESS NEWS
2022-23ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡ ಮಾಧ್ಯಮದಲ್ಲಿ 125ಕ್ಕೆ 125 ಪರಿಪೂರ್ಣ ಅಂಕ ಪಡೆದ ತೀರ್ಥಹಳ್ಳಿಯ ಸಹ್ಯಾದ್ರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕುಮಾರಿ ಅಪೇಕ್ಷಾ. ಟಿ.ಎಂ.ಇವರಿಗೆ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ, ದಾವಣಗೆರೆ ವತಿಯಿಂದ ಕನ್ನಡ ಕೌಸ್ತುಭ ರಾಜ್ಯ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಇವರ ಅಧ್ಯಕ್ಷತೆಯಲ್ಲಿ ಇದೇ ಜುಲೈ,30 ಭಾನುವಾರ ದಾವಣಗೆರೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ, ಅಪೇಕ್ಷಾ ಅವರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. 95% ರಷ್ಟು ಅಂಕ ಪಡೆದು ತಾಲೂಕಿಗೆ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ಇವರು ತೀರ್ಥಹಳ್ಳಿ ಪಟ್ಟಣದ ಶಂಕರ ಗುಡ್ಡ ನಿವಾಸಿಗಳಾದ ಶ್ರೀಮಂಜುನಾಥ್,ಟಿ.ಎಸ್.
ಶ್ರೀಮತಿ ಭಾಗ್ಯಲಕ್ಷ್ಮಿ. ಎಸ್. ಇವರ ಸುಪುತ್ರಿ.

ಇದನ್ನೂ ಓದಿ : ಅಡಿಕೆ ದರ ಎಷ್ಟಿದೆ..ಕಾಳು ಮೆಣಸು ದರ ಎಷ್ಟು?

[embedyt] https://www.youtube.com/watch?v=-UejHxlYBXg%5B/embedyt%5D

HOW TO APPLY : NEET-UG COUNSELLING 2023

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.