Categories
ತೀರ್ಥಹಳ್ಳಿ

ವಾಗ್ದೇವಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ರಾಷ್ಟ್ರ ಮಟ್ಟಕ್ಕೆ ಆಯ್ಕೆ.‌

ವಾಗ್ದೇವಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ರಾಷ್ಟ್ರ ಮಟ್ಟಕ್ಕೆ ಆಯ್ಕೆ.‌
– ರಾಜ್ಯಮಟ್ಟದ ಕಬಡ್ಡಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಆಯ್ಕೆ
– ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದಾರೆ.

NAMMUR EXPRESS NEWS
ಶ್ರಾವ್ಯ ಹೆಚ್ ಓ ಮತ್ತು ಅಮೂಲ್ಯ ಕೆ.ಪಿ ದಿನಾಂಕ 14 /06 /2025 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇವರು ಆಯೋಜಿಸಿದ ರಾಜ್ಯಮಟ್ಟದ ಕಬಡ್ಡಿ ಆಯ್ಕೆ
ಪ್ರಕ್ರಿಯೆಯಲ್ಲಿ ವಾಗ್ದೇವಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಅಮೂಲ್ಯ ಕೆ.ಪಿ ಹಾಗೂ ಶ್ರಾವ್ಯ ಹೆಚ್ ಓ ಇವರು ರಾಷ್ಟ್ರಮಟ್ಟದ ಸ್ಪರ್ಧೆಗೆ
ಆಯ್ಕೆಯಾಗಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿರುತ್ತಾರೆ.

ರಾಷ್ಟ್ರಮಟ್ಟದ ಕ್ರೀಡಾಕೂಟವು ಜೂನ್ 28 ರಿಂದ ಜುಲೈ 1 ರ ತನಕ ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿದೆ.
ಇವರ ಈ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು ಹಾಗೂ ಉಪನ್ಯಾಸಕರು ಶುಭಕೋರಿ ಕ್ರೀಡಾಕೂಟಕ್ಕೆ ಶುಭಹಾರೈಸಿರುತ್ತಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.