Categories
ತೀರ್ಥಹಳ್ಳಿ

ಕೋಣಂದೂರು ಎನ್. ಪಿ. ಯು ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಂಭ್ರಮ!

ಕೋಣಂದೂರು ಎನ್. ಪಿ. ಯು ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಂಭ್ರಮ!
* ಗಣಕಯಂತ್ರ ಪ್ರಯೋಗಾಲಯ ಆರಂಭೋತ್ಸವ: ವಿದ್ಯಾರ್ಥಿ ಸಂಘ ಉದ್ಘಾಟನೆ

NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಪಟ್ಟಣದ ರಾಷ್ಟ್ರೀಯ ಶಿಕ್ಷಣ ಸಮಿತಿ(ರಿ)ಶಿವಮೊಗ್ಗ, ರಾಷ್ಟ್ರೀಯ ಪದವಿ ಪೂರ್ವ ಕಾಲೇಜು ಕೋಣಂದೂರಲ್ಲಿ ಆಗಸ್ಟ್ 9 ರಂದು 2025-26 ನೇ ಸಾಲಿನ ವಿದ್ಯಾರ್ಥಿ ಸಂಘ, ಗಣಕ ಯಂತ್ರ ಪ್ರಯೋಗಲಯ ಉದ್ಘಾಟನೆ, ಹಾಗೂ 2024-25 ನೇ ಸಾಲಿನ ದ್ವಿತೀಯ ಪಿ ಯು ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ರಾಷ್ಟೀಯ ಶಿಕ್ಷಣ ಸಮಿತಿಯ ಗೌರವಾನ್ವಿತ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಮಾತನಾಡಿ,ಇಂದಿನ ವಿದ್ಯಾರ್ಥಿಗಳಿಗೆ ನೈತಿಕತೆ ಜ್ಞಾನ ತುಂಬಾ ಅವಶ್ಯಕತೆ ಇದೆ ಎಂದು ತಿಳಿಸುತ್ತಾ, ಪ್ರಚಲಿತಾ ವಿಷಯಗಳನ್ನು ಗ್ರಹಿಸುವುದರ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಂಡು, ಪ್ರತಿಯೊಬ್ಬರೂ ಆತ್ಮಸ್ಥೈರ್ಯ ಹೆಚ್ಚಿಸಿಕೊಂಡರೆ ಕಲಿಕೆ ಸುಲಭ ಎಂದು ತಿಳಿಸಿದರು.ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದೂರ ಉಳಿಯುವುದು ಇಂದು ಅತಿ ಅಗತ್ಯವಾಗಿದ್ದು, ಪ್ರತಿಯೊಬ್ಬರೂ ಸರಳತೆ, ಉತ್ತಮ ನಡತೆ, ಶ್ರದ್ದೆಯನ್ನು ರೂಡಿಸಿಕೊಂಡು ತಮ್ಮ ಜೀವನವನ್ನು ಉತ್ತಮಪಡಿಸಿಕೊಳ್ಳಲು ತಿಳಿಸಿದರು.
ಮುಖ್ಯ ಅಥಿತಿಗಳಾಗಿ ಭಾಗವಹಿಸಿದ ಡಾ.ಮುರುಳಿಧರ್ ಕಿರಣಕೆರೆ ಮಾತನಾಡಿ ಇಂದಿನ ವಿದ್ಯಾರ್ಥಿಗಳು ಸವಾಲುಗಳನ್ನು ಎದುರಿಸುವ ಕಲೆ ಮತ್ತು ವ್ಯಕ್ತಿತ್ವ ರೂಪಿಸಿ ಕೊಳ್ಳುವತೆ, ಜೀವನದಲ್ಲಿ ಯಾವಾಗಲು ಧನಾತ್ಮಕ ಚಿಂತನೆಗಳನ್ನು ರೂಢಿಸಿಕೊಳ್ಳುವುದು ಅತಿ ಅಗತ್ಯ ಎಂದರು.
ಕಾರ್ಯಕ್ರಮದಲ್ಲಿ ರಾಷ್ಟೀಯ ಶಿಕ್ಷಣ ಸಮಿತಿಯ ನಿರ್ದೇಶಕರಾದ ಶಿವಕುಮಾರ್,ರಾಷ್ಟ್ರೀಯ ಪ್ರೌಢ ಶಾಲೆಯ ಉಪ ಪ್ರಾಂಶುಪಾಲರು ಕೆ.ಬಿ. ಪ್ರಕಾಶ್, ವಿದ್ಯಾರ್ಥಿ ಸಂಘದ ಪ್ರತಿನಿಧಿ ಕು!ನಿಹಾಲ್, ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಮಹಾಂತೇಶ್ ಗೌಡ ವಹಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.