ಶಿಕ್ಷಕಿ ಕನಕಮ್ಮ 22 ವರ್ಷಗಳ ಅಮೋಘ ಸೇವೆ.
– ತೀರ್ಥಹಳ್ಳಿ ಕುವೆಂಪು ಶಾಲೆ ಶಿಕ್ಷಕಿ ಕನಕಮ್ಮ ಅವರಿಗೆ ಬಿಳ್ಕೊಡುಗೆ
– ಸತೀಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಶಾಲೆಯಲ್ಲಿ ಮಾದರಿ ಕಾರ್ಯಕ್ರಮ
NAMMUR EXPRESS NEWS
ತೀರ್ಥಹಳ್ಳಿ : ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆ ತೀರ್ಥಹಳ್ಳಿ ( ಕುವೆಂಪು ಶಾಲೆ)ಯಲ್ಲಿ ಇತ್ತೀಚಿಗೆ 22 ವರ್ಷಗಳ ಅಮೋಘ ಸೇವೆಯನ್ನು ಸಲ್ಲಿಸಿರುವ ಕನಕಮ್ಮ ಅವರಿಗೆ ಬಿಳ್ಕೊಡುಗೆ ಸಮಾರಂಭ ನಡೆಸಲಾಯಿತು. ಎಸ್ ಡಿ ಎಂ ಸಿ ಅಧ್ಯಕ್ಷರಾದ ಸತೀಶ್ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಬಿ ಇ ಓ ಗಣೇಶ್, ಟಿಪಿಓ ಚಂದ್ರಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಜಯಂತಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರು ಲತಾ, ಶಾಲಾ ಮುಖ್ಯೋಪಾಧ್ಯಾಯರಾದ ನಾಗರಾಜ ಹಾಗು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿಗಳು, ಎಲ್ಲ ಪದಾಧಿಕಾರಿಗಳು ಮತ್ತು ದೈಹಿಕ ಶಿಕ್ಷಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕನಕಮ್ಮ ಅವರು ಕುವೆಂಪು ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿಯಾಗಿದ್ದು, ಇವರು ವಯೋ ನಿವೃತ್ತಿಯನ್ನು ಹೊಂದಿದ್ದು ಈ ಶಾಲೆಯಲ್ಲಿ 22 ವರ್ಷಗಳ ಅಮೋಘ ಸೇವೆಯನ್ನು ಸಲ್ಲಿಸಿದ್ದಾರೆ. ಇವರು ಅತ್ಯಂತ ಕ್ರಿಯಾಶೀಲರಾಗಿದ್ದು ಶಾಲೆಯ ಸರ್ವತೋಮುಖ ಬೆಳವಣಿಗೆಯಲ್ಲಿ ಹೆಚ್ಚಿನ ಶ್ರಮವಹಿಸಿ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯಲ್ಲಿ ತೊಡಗುವಂತೆ ಪ್ರೋತ್ಸಾಹಿಸುತ್ತಾ ಶಾಲಾ ಸ್ವಚ್ಛತೆ ಮತ್ತು ಶಿಸ್ತಿಗೆ ಹೆಚ್ಚು ಆದ್ಯತೆಯನ್ನು ನೀಡಿ ತಮ್ಮ ಸೇವೆಯನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಿರುತ್ತಾರೆ. ಕನಕಮ್ಮ ಇವರ ಸೇವೆಯನ್ನು ಸ್ಮರಿಸಿ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಿದ್ದು ಶಾಲಾ ಬಳಗ ಕನಕಮ್ಮ ಇವರಿಗೆ ಆಯುಷ್ಯ ಆರೋಗ್ಯ ಮತ್ತು ನೆಮ್ಮದಿಯನ್ನು ಭಗವಂತನು ಕರುಣಿಸಲೆಂದು ಹಾರೈಸಲಾಯಿತು. ಮಕ್ಕಳು ಬೇಸರದಿಂದ ಶಿಕ್ಷಕಿಯನ್ನು ಬೀಳ್ಕೊಟ್ಟರು.