- ಶಿವಮೊಗ್ಗ ಎಸ್ಪಿ ಹೇಳಿಕೆ: ಕೋರ್ಟ್ ಮುಂದೆ ಹಾಜರು
- ಮತ್ತಷ್ಟು ವಿಡಿಯೋ ಶಂಕೆ: ತನಿಖೆ ಜೋರು
ಶಿವಮೊಗ್ಗ: ಹಲವು ಯುವತಿಯರ ಜೊತೆಗೆ ಸಲುಗೆಯಿಂದ ಇದ್ದು, ವಿಡಿಯೋಗಳನ್ನು ರೆಕಾರ್ಡ್ ಮಾಡಿ ವೈರಲ್ ಮಾಡಿದ ಆರೋಪ ಸಂಬಂಧ ಯುವಕನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ತೀರ್ಥಹಳ್ಳಿಯ ಎಬಿವಿಪಿ ಸಂಘಟನೆಯ ನಾಯಕ ಕೆಲವು ಯುವತಿಯರ ಜೊತೆಗೆ ಸಲುಗೆಯಿಂದ ಇರುವ ವಿಡಿಯೋಗಳು ವೈರಲ್ ಆಗಿತ್ತು. ಇದರ ಬೆನ್ನಿಗೆ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಜಿಲ್ಲಾ ರಕ್ಷಣಾಧಿಕಾರಿ ವಾಟ್ಸಪ್ ಮೂಲಕ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.
ಯುವಕನೊಬ್ಬ ಕೆಲವು ಯುವತಿಯರ ಜೊತೆಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ವಿಡಿಯೋ ತೀರ್ಥಹಳ್ಳಿಯಲ್ಲಿ ವೈರಲ್ ಆಗಿದೆ. ಯುವಕನನ್ನು ವಶಕ್ಕೆ ಪಡೆದಿದ್ದೇವೆ. ಆತನ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತಿದೆ. ಯುವಕನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುತ್ತಿದೆ ಎಂದು ಮಿಥುನ್ ಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ವಾಟ್ಸಪ್ ಸಂದೇಶದ ಹೇಳಿಕೆ ನೀಡಿದ್ದಾರೆ.
ತೀರ್ಥಹಳ್ಳಿಯಲ್ಲಿ ನಡೆದ ಈ ಪ್ರಕರಣ ಭಾರೀ ಸದ್ದು ಮಾಡಿದ್ದು ಜನ ತಲೆ ತಗ್ಗಿಸುವಂತೆ ಮಾಡಿತ್ತು.