ತೀರ್ಥಹಳ್ಳಿ ಮಹಿಷಿ ಮಠದಲ್ಲಿ ಕದ್ದವನ ಕಾಲಿಗೆ ಗುಂಡೇಟು!
– ಪೊಲೀಸ್ ಸಿಬ್ಬಂದಿ ಮೇಲೆ ದಾಳಿಗೆ ಯತ್ನದ ವೇಳೆ ಘಟನೆ
– ಶಿಕಾರಿಪುರದಲ್ಲಿ ಮಾಳೂರು ಪೊಲೀಸ್ರಿಂದ ಕಳ್ಳನ ಅರೆಸ್ಟ್
NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ತಾಲೂಕು ಮಹಿಷಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ದಾಳಿಗೆ ಯತ್ನಿಸಿದ ಹಿನ್ನೆಲೆ ಪೊಲೀಸರು ಆರೋಪಿಯ ಎಡಗಾಲಿಗೆ ಗುಂಡು ಹೊಡೆದಿದ್ದಾರೆ.
ಶಿಕಾರಿಪುರ ಪಟ್ಟಣದ ಟ್ಯಾಂಕ್ ಬಂಡ್ ಸಮೀಪ ಆರೋಪಿ ಶ್ರೀನಿವಾಸ ಅಲಿಯಾಸ್ ಸೀನಾ (25) ಎಂಬಾತನನ್ನು ಬಂಧಿಸಲು ತೀರ್ಥಹಳ್ಳಿಯ ಮಾಳೂರು ಠಾಣೆ ಪೊಲೀಸರು ತೆರಳಿದ್ದರು. ಈ ಸಂದರ್ಭ ಶ್ರೀನಿವಾಸ, ಪೊಲೀಸ್ ಸಿಬ್ಬಂದಿ ಸಂತೋಷ್ ಅವರ ಮೇಲೆ ದಾಳಿಗೆ ಯತ್ನಿಸಿದ್ದಾನೆ. ಈ ಸಂದರ್ಭ ಮಾಳೂರು ಠಾಣೆ ಪಿಎಸ್‌ಐ ಕುಮಾರ್ ಅವರು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ.
ಆದರೂ ಶ್ರೀನಿವಾಸ, ಪೊಲೀಸ್ ಸಿಬ್ಬಂದಿ ಸಂತೋಷ್ ಮೇಲೆ ಮತ್ತೊಮ್ಮೆ ದಾಳಿಗೆ ಯತ್ನಿಸಿದ್ದಾನೆ. ಈ ಹಿನ್ನೆಲೆ ಆತನ ಎಡಗಾಲಿಗೆ ಪಿಎಸ್‌ಐ ಕುಮಾರ್ ಅವರು ಗುಂಡು ಹಾರಿಸಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾಧ್ಯಮಗಳಿಗೆ ವಾಟ್ಸಪ್‌ನಲ್ಲಿ ತಿಳಿಸಿದ್ದಾರೆ.ಪೊಲೀಸ್ ಸಿಬ್ಬಂದಿ ಸಂತೋಷ್ ಅವರ ಮೇಲೆ ದಾಳಿಗೆ ಯತ್ನಿಸಿದ್ದಾನೆ. ಈ ಸಂದರ್ಭ ಮಾಳೂರು ಠಾಣೆ ಪಿಎಸ್‌ಐ ಕುಮಾರ್ ಅವರು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ.
ಆದರೂ ಶ್ರೀನಿವಾಸ, ಪೊಲೀಸ್ ಸಿಬ್ಬಂದಿ ಸಂತೋಷ್ ಮೇಲೆ ಮತ್ತೊಮ್ಮೆ ದಾಳಿಗೆ ಯತ್ನಿಸಿದ್ದಾನೆ. ಈ ಹಿನ್ನೆಲೆ ಆತನ ಎಡಗಾಲಿಗೆ ಪಿಎಸ್‌ಐ ಕುಮಾರ್ ಅವರು ಗುಂಡು ಹಾರಿಸಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾಧ್ಯಮಗಳಿಗೆ ವಾಟ್ಸಪ್‌ನಲ್ಲಿ ತಿಳಿಸಿದ್ದಾರೆ.
