ತೀರ್ಥಹಳ್ಳಿ ಹುಡುಗ ರಾಜ್ಯಕ್ಕೆ 2ನೇ ಟಾಪರ್
– ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಹರ್ಷಿತ್
– ಆರಗದ ಮರಗಳಲೆಯ ಹರೀಶ್, ಲತಾ ದಂಪತಿ ಪುತ್ರ
– ತೀರ್ಥಹಳ್ಳಿ ಸರ್ಕಾರಿ ಶಾಲೆಯಲ್ಲಿ ಓದಿದ್ದ ಸಾಧಕ
NAMMUR EXPRESS NEWS
ತೀರ್ಥಹಳ್ಳಿ: ಆರಗದ ಮರಗಳಲೆಯ ಹರೀಶ್ ಮತ್ತು ಲತಾ ದಂಪತಿಗಳ ಪುತ್ರನಾದ ಹರ್ಷಿತ್ ಇವನು ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಗಳಿಸಿದ್ದಾನೆ. ಪ್ರೌಢಶಾಲಾ ವಿದ್ಯಾಭ್ಯಾಸವನ್ನು ತೀರ್ಥಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ 8ರಿಂದ 10ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದ.