Categories
ತೀರ್ಥಹಳ್ಳಿ

ತೀರ್ಥಹಳ್ಳಿ ಕನ್ನಡ ಸಾಹಿತ್ಯ ಸಮ್ಮೇಳನ ಶುರು

ತೀರ್ಥಹಳ್ಳಿ ಕನ್ನಡ ಸಾಹಿತ್ಯ ಸಮ್ಮೇಳನ ಶುರು
– ಅದ್ದೂರಿ ಮೆರವಣಿಗೆ: ಕನ್ನಡ ಧ್ವಜ ವಂದನೆ
– ಕನ್ನಡ ರಂಗಲ್ಲಿ ಮುಳುಗಿದ ತೀರ್ಥಹಳ್ಳಿ

NAMMUR EXPRESS
ತೀರ್ಥಹಳ್ಳಿ: ತೀರ್ಥಹಳ್ಳಿ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ನಡೆಯುತ್ತಿದೆ. ಬಾಳೆಬೈಲಿನ ಕನ್ನಡ ಭವನದಿಂದ ಸಮ್ಮೇಳನ ಅಧ್ಯಕ್ಷರನ್ನು ಮೆರವಣಿಗೆಯಲ್ಲಿ ಸಭಾ ಮಂಟಪಕ್ಕೆ ಕರೆತರಲಾಯಿತು. ನಾಗನಂದ ಮುಖ್ಯದ್ವಾರದಲ್ಲಿ ಮಾಜಿ ಶಾಸಕ ಕಡಿದಾಳು ದಿವಾಕರ್ ಮೆರವಣಿಗೆಗೆ ಚಾಲನೆ ನೀಡಿದರು.ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಮಕ್ಕಳು ಸೇರಿ 350ಕ್ಕೂ ಹೆಚ್ಚು ಮಂದಿ ಭಾಗಿಯಾದರು. ರಾಷ್ಟ್ರಧ್ವಜ, ನಾಡ ದ್ವಜ ಮತ್ತು ಪರಿಷತ್ತಿನ ಧ್ವಜಾರೋಹಣವನ್ನು ಶಾಸಕ ಆರಗ ಜ್ಞಾನೇಂದ್ರ, ಜಿಲ್ಲಾ ಕಸಾಪ ಅಧ್ಯಕ್ಷ ಡಿ ಮಂಜುನಾಥ್, ತಾಲೂಕು ಕಸಾಪ ಅಧ್ಯಕ್ಷ ಟಿ ಕೆ ರಮೇಶ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಸಮ್ಮೇಳನದ ಉದ್ಘಾಟನಾ ಸಮಾರಂಭವನ್ನು ಡಾ. ಯು ಆರ್ ಅನಂತಮೂರ್ತಿ ವೇದಿಕೆಯಲ್ಲಿ ನಡೆಯಲಿದ್ದು, ಕನ್ನಡ ಮನಸುಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳ ಪ್ರಮುಖರು ಹಾಜರಿದ್ದರು.

ಪುಸ್ತಕಗಳು ಲಭ್ಯ

ಪುಸ್ತಕ ಮಳಿಗೆಗಳು ಆಗಮಿಸಿದ್ದು ತಮ್ಮ ನೆಚ್ಚಿನ ಪುಸ್ತಕಗಳನ್ನು ಖರೀದಿ ಮಾಡಬಹುದು. ದಿನವಿಡಿ ಸಾಹಿತ್ಯ ಹಬ್ಬ ನಡೆಯಲಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.