Categories
ತೀರ್ಥಹಳ್ಳಿ ಶಿವಮೊಗ್ಗ

ತೀರ್ಥಹಳ್ಳಿ : ತೀರ್ಥಹಳ್ಳಿ – ಶಿವಮೊಗ್ಗ ಹೆದ್ದಾರಿಯಲ್ಲಿ ಟಿಪ್ಪರ್‌ ಹಾಗೂ ಪಿಕ್‌ಅಪ್‌ ವಾಹನ ಡಿಕ್ಕಿ

ಟಾಪ್ 3 ನ್ಯೂಸ್

ತೀರ್ಥಹಳ್ಳಿ : ತೀರ್ಥಹಳ್ಳಿ – ಶಿವಮೊಗ್ಗ ಹೆದ್ದಾರಿಯಲ್ಲಿ ಟಿಪ್ಪರ್‌ ಹಾಗೂ ಪಿಕ್‌ಅಪ್‌ ವಾಹನ ಡಿಕ್ಕಿ
– ಶಿವಮೊಗ್ಗದಲ್ಲಿ ಮೀನುಗಾರಿಕೆ ನಿಷೇಧ..!!
– ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಶೌಚಾಲಯದಲ್ಲಿ ಚಿನ್ನದ ಸರ ಕಳ್ಳತನ.!

NAMMUR EXPRESS NEWS
ತೀರ್ಥಹಳ್ಳಿ: ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಬಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಮತ್ತು ಪಿಕ್‌ಅಪ್ ವ್ಯಾನ್ ನಡುವೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ವಾಹನ ಮಗುಚಿ ಬಿದ್ದಿದೆ. ಅದರ ಮುಂಭಾಗದ ಚಕ್ರಗಳು ಚೆಲ್ಲಾಪಿಲ್ಲಿಯಾಗಿದೆ. ಪಿಕ್‌ಅಪ್ ವ್ಯಾನ್‌ನ ಮುಂಭಾಗಕ್ಕೂ ಹಾನಿಯಾಗಿದ್ದು, ಅದೃಷ್ಟವಶಾತ್ ಎರಡೂ ವಾಹನಗಳ ಚಾಲಕರು ಸೇರಿದಂತೆ ಯಾರಿಗೂ ಯಾವುದೇ ಅಪಾಯವಾಗಿಲ್ಲ.

– ಶಿವಮೊಗ್ಗದಲ್ಲಿ ಮೀನುಗಾರಿಕೆ ನಿಷೇಧ..!!

ಶಿವಮೊಗ್ಗ: ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳು ವಂಶಾಭಿವೃದ್ದಿ ಚಟುವಟಿಕೆಗಳು ನಡೆಸಲಿವೆ. ಆದ್ದರಿಂದ ಪ್ರತಿ ವರ್ಷದ ಜೂನ್ 1 ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮೀನುಗಾರಿಕೆ ಉಪ ನಿರ್ದೇಶಕರಾದ ಶಿವಕುಮಾರ್ ತಿಳಿಸಿದ್ದಾರೆ.

– ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಶೌಚಾಲಯದಲ್ಲಿ ಚಿನ್ನದ ಸರ ಕಳ್ಳತನ..!!

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಶೌಚಾಲಯದಲ್ಲಿ ಚಿನ್ನದ ಸರ ಕಳ್ಳತನವಾಗಿದೆ ಎಂದು ಚಿತ್ರದುರ್ಗದ ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಘಟನೆ ಸಂಬಂಧ ದೂರು ನೀಡಿದ್ದಾರೆ. ಚಿತ್ರದುರ್ಗದ ಪಾರ್ವತಮ್ಮ ಮತ್ತು ಅವರ ಸೊಸೆ ಜೂನ್‌ 7ರಂದು ಶಿವಮೊಗ್ಗಕ್ಕೆ ಆಗಮಿಸಿದ್ದರು. ಇಲ್ಲಿನ ಕಾಲೇಜಿನಲ್ಲಿ ಓದುತ್ತಿರುವ ತಮ್ಮ ಪುತ್ರಿಯನ್ನು ಮಾತನಾಡಿಸಿ ಊರಿಗೆ ಹಿಂತಿರುಗುತ್ತಿದ್ದರು. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬಸ್‌ ಹತ್ತಲು ಬಂದಾಗ ಪಾರ್ವತಮ್ಮ ಮತ್ತು ಅವರ ಸೊಸೆ ಶೌಚಾಲಯಕ್ಕೆ ತೆರಳಿದ್ದರು. ತಮ್ಮ ವ್ಯಾನಿಟಿ ಬ್ಯಾಗ್‌ ಅನ್ನು ಹೊರಗೆ ಇಟ್ಟು ಹೋಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪಾರ್ವತಮ್ಮ ಮತ್ತು ಅವರ ಸೊಸೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಚಿತ್ರದುರ್ಗದ ತಮ್ಮೂರಿಗೆ ಹಿಂತಿರುಗಿದ್ದರು. ರಾತ್ರಿ ಮನೆಯಲ್ಲಿ ವ್ಯಾನಿಟಿ ಬ್ಯಾಗ್‌ ತೆಗೆದಾಗ ಅದೊರಳಗಿದ್ದ ಪರ್ಸ್‌ ಇರಲಿಲ್ಲ. ಆ ಪರ್ಸ್‌ನಲ್ಲಿ 20 ಗ್ರಾಂ ತೂಕದ ಚಿನ್ನದ ಚೈನ್‌ ಇತ್ತು. ಇದರ ಮೌಲ್ಯ 70 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ತಾವು ಶೌಚಾಲಯಕ್ಕೆ ತೆರಳಿದ್ದ ಸಂದರ್ಭ ಚೈನ್‌ ಇರುವ ಪರ್ಸ್‌ ಕಳ್ಳತನ ಆಗಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.