Categories
ಕೊಪ್ಪ ತೀರ್ಥಹಳ್ಳಿ

ಹುಲಿ ಉಗುರು: ಕೊಪ್ಪ, ತೀರ್ಥಹಳ್ಳಿಯಲ್ಲಿ ಕಾರ್ಯಚರಣೆ!

ಹುಲಿ ಉಗುರು: ಕೊಪ್ಪ, ತೀರ್ಥಹಳ್ಳಿಯಲ್ಲಿ ಕಾರ್ಯಚರಣೆ!
– ಕೊಪ್ಪದಲ್ಲಿ ಅರಣ್ಯ ಅಧಿಕಾರಿ ಅರೆಸ್ಟ್!
– ತೀರ್ಥಹಳ್ಳಿಯಲ್ಲೂ ಹುಲಿ ಉಗುರು ಪತ್ತೆ ಕಾರ್ಯ ಶುರು!
– ಹುಲಿ ಉಗುರು ತನಿಖೆ ಬಗ್ಗೆ ಶಾಸಕ ಆರಗ ಜ್ಞಾನೇಂದ್ರ ಹೇಳಿದ್ದೇನು..?

NAMMUR EXPRESS NEWS
ಕೊಪ್ಪ: ಹುಲಿ ಉಗುರು ಧರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಎನ್.ಆರ್.ಪುರದಲ್ಲಿ ಬಂಧನ ಮಾಡಿ ಕೊಪ್ಪ ಡಿ.ಎಫ್.ಓ ಕಚೇರಿಗೆ ಕರೆ ತರಲಾಗಿದೆ. ಡಿ.ಆರ್.ಎಫ್.ಓ ದರ್ಶನ್ ವಿರುದ್ಧ ಹುಲಿ ಉಗುರು ಧರಿಸಿದ್ದ ದೂರು ಬಂದಿದ್ದು, ಈ ಬಗ್ಗೆ ತನಿಖೆಗೆ ಹಾಜರಾಗುವಂತೆ ಇಲಾಖೆ ಸೂಚಿಸಿತ್ತು. ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕೊಪ್ಪದ ಡಿ.ಎಫ್.ಓ ನಂದೀಶ್ ಅಮಾನತು ಮಾಡಿ ಆದೇಶ ಹೊರಡಿಸಿದ್ದರು. ಇದೀಗ ಎನ್.ಆರ್.ಪುರದಲ್ಲಿ ಬಂಧನ ಮಾಡಿ ಕೊಪ್ಪ ಡಿ.ಎಫ್.ಓ ಕಚೇರಿಗೆ ಕರೆ ತರಲಾಗಿದೆ. ದರ್ಶನ್ ಹುಲಿಯ ಉಗುರಿನ ಡಾಲರ್ ಧರಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಶೋಕಿ ಮಾಡಿದ್ದ. ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ದರ್ಶನ್ ಫೋಟೋ ಡಿಲಿಟ್ ಕೂಡ ಮಾಡಿದ್ದ.ಕಾನೂನು ಎಲ್ಲರಿಗೂ ಒಂದೇ ಸಂತೋಷ್, ಮಾರ್ಕಂಡೇಯ ದೇವಸ್ಥಾನದ ಅರ್ಚಕರು ಸೇರಿದಂತೆ ಅಮಾಯಕರ ಮೇಲೆ ಕ್ರಮ ಕೈಗೊಳ್ಳುವ ಅರಣ್ಯ ಇಲಾಖೆಯವರು ಆರ್‌ಎಫ್‌ಒ ದರ್ಶನ್ ಮೇಲೆಯೂ ಕ್ರಮ ತೆಗೆದುಕೊಳ್ಳಬೇಕು ಎಂದು ದೂರುದಾರ ಸುಪ್ರೀತ್ ತಿಳಿಸಿದ್ದರು.

ಹುಲಿ ಉಗುರು ತನಿಖೆ ಬಗ್ಗೆ ಶಾಸಕ ಆರಗ ಜ್ಞಾನೇಂದ್ರ ಹೇಳಿದ್ದೇನು..?

ತೀರ್ಥಹಳ್ಳಿ: ಮಲೆನಾಡು ಹಾಗೂ ಕರಾವಳಿ ಭಾಗದ ಅನೇಕ ಮನೆಗಳಲ್ಲಿ ಹುಲಿ ಉಗುರು ಸೇರಿದಂತೆ ವನ್ಯಜೀವಿಗಳ ಉತ್ಪನ್ನಗಳನ್ನು ಇಟ್ಟುಕೊಳ್ಳುವುದು ಬಹಳ ವರ್ಷಗಳಿಂದ ನಡೆಯುತ್ತಿದೆ. ಈ ಕಾರಣಕ್ಕಾಗಿ ಅನೇಕ ಜನರ ಬಂಧನವಾಗಿದೆ. ಅನೇಕರು ಇದನ್ನೇ ದಾಳವಾಗಿ ಮಾಡಿಕೊಂಡು ಧರಿಸಿರುವ ಅಂತಹ ಪೆಂಡೆಂಟ್ ಫೋಟೋವನ್ನು ವೈರಲ್ ಮಾಡುತ್ತಿದ್ದಾರೆ. ಹಾಗೆಯೇ ಅವರೆಲ್ಲರ ಮೇಲು ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಇದು ಸರಿಯಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಹಿಂದೆ ಮುಂದೆ ಏನು ಯೋಚನೆ ಮಾಡದೆ ಅರಣ್ಯ ಅಧಿಕಾರಿಗಳು ಅವರನ್ನು ಬಂಧನ ಮಾಡುತ್ತಿದ್ದಾರೆ. ಮಲೆನಾಡಿನ ಭಾಗದಲ್ಲಿ ನೂರಾರು ವರ್ಷಗಳ ಹಿಂದಿನಿಂದ ಮನೆಯಲ್ಲಿ ಆಲಂಕಾರಿಕ ವಸ್ತುಗಳಾಗಿ ವನ್ಯಜೀವಿಯ ಉತ್ಪನ್ನಗಳನ್ನು ಇಟ್ಟು ಕೊಂಡಿರುತ್ತಾರೆ. ಕಾಡಿನಲ್ಲಿ ಸತ್ತು ಬಿದ್ದಿರುವಂತಹ ಹುಲಿಯ ಉಗುರುಗಳನ್ನು ಎಲ್ಲರೂ ಕೂಡ ಮಾರಾಟ ಮಾಡುತ್ತಿದ್ದರು. ಅದೊಂದು ಧೈರ್ಯದ ಪ್ರತೀಕ ಎಂದು ಹೇಳಿ ಎಲ್ಲರೂ ಕೊರಳಿಗೆ ಹಾಕಿಕೊಳ್ಳುತ್ತಿದ್ದರು. ಅದನ್ನು ಯೋಚನೆ ಮಾಡದೆ ಜನರನ್ನು ಏಕಾಏಕಿ ಬಂಧಿಸಿರುವುದು ಸರಿಯಲ್ಲ.ಈ ಕುರಿತು ಸರ್ಕಾರ ಮಧ್ಯ ಪ್ರವೇಶಿಸುವುದು ಅವಶ್ಯಕ ಎಂದು ಹೇಳಿದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.