ಸರ್ಕಾರಿ ಪಿಯು ಕಾಲೇಜು ಹಳೆ ವಿದ್ಯಾರ್ಥಿಗಳ ಸಭೆ!
* 50ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಹಾಜರ್
* ಕಾಲೇಜಿನ ಅಭಿವೃದ್ಧಿಗೆ ಬದ್ಧ: ಶಾಸಕ ಆರಗ ಹಲವು ಸಲಹೆ
NAMMUR EXPRESS NEWS
ತೀರ್ಥಹಳ್ಳಿ: ಸರ್ಕಾರಿ ಪದವಿ ಪೂರ್ವ ಕಾಲೇಜು, ತೀರ್ಥಹಳ್ಳಿ ಇದರ ಹಳೆ ವಿದ್ಯಾರ್ಥಿಗಳ ಸಭೆ ಕಾಲೇಜಲ್ಲಿ ಸೆ.28ರಂದು ನಡೆಯಿತು.
ಶಾಸಕ ಆರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ಭಾಗದ 50ಕ್ಕೂ ಹೆಚ್ಚು ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.
1983ರಲ್ಲಿ ಈ ಕಾಲೇಜು ಪ್ರಾರಂಭವಾಗಿದ್ದು, ಅಂದಿನಿಂದ ಇಂದಿನವರೆಗೆ ಸಾವಿರಾರು ವಿದ್ಯಾರ್ಥಿಗಳು ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಶೈಕ್ಷಣಿಕವಾಗಿ ಉನ್ನತ ಮಟ್ಟದ ಸಾಧನೆಯೊಂದಿಗೆ ಉದ್ಯೋಗದಲ್ಲಿಯೂ ಒಳ್ಳೆಯ ಸ್ಥಾನಮಾನಗಳನ್ನು ಪಡೆದುಕೊಂಡಿರುತ್ತಾರೆ. ಕಾಲೇಜಿನ ಅಭಿವೃದ್ಧಿಯ ಹಿನ್ನಲೆಯಲ್ಲಿ ಈ ಕಾಲೇಜಿನಲ್ಲಿ ಓದಿರುವ ಎಲ್ಲಾ ಹಳೆಯ ವಿದ್ಯಾರ್ಥಿಗಳು ಒಂದಾಗಬೇಕು. ನಾವೆಲ್ಲರೂ ಸೇರಿ ಈ ಕಾಲೇಜನ್ನು ಮತ್ತಷ್ಟು ಬೆಳೆಸಲು ಪ್ರಯತ್ನ ಮಾಡೋಣ ಎಂದು ಅಧ್ಯಕ್ಷತೆ ವಹಿಸಿದ್ದ ಆರಗ ಜ್ಞಾನೇಂದ್ರ ಹೇಳಿದರು.
ಕಾಲೇಜು ಸಮಿತಿಯ ಉಪಾಧ್ಯಕ್ಷರಾದ ನಾಗರಾಜ ಶೆಟ್ಟಿ, ಪ್ರಾಚಾರ್ಯರಾದ ಸುಧಾ ವೈ.ಎಂ.,, ಪ್ರಮುಖರಾದ ಸೊಪ್ಪುಗುಡ್ಡೆ ರಾಘವೇಂದ್ರ, ಜ್ಯೋತಿ ಮೋಹನ್, ರಮೇಶ್ ಸಿ. ಆರ್, ನರೇಂದ್ರ ಕಾಮತ್, ಉಪನ್ಯಾಸಕ ಕೃಷ್ಣಮೂರ್ತಿ ಇತರರು ಇದ್ದರು.
ಕಾಲೇಜಿನ ಅಭಿವೃದ್ಧಿಗೆ ದಾನಿಗಳು, ಹಳೆ ವಿದ್ಯಾರ್ಥಿಗಳು ಸಹಾಯ ಮಾಡುತ್ತಿದ್ದು ಇನ್ನಷ್ಟು ಅಭಿವೃದ್ಧಿ ಆಗಬೇಕಿದೆ. ಈ ನಿಟ್ಟಿನಲ್ಲಿ ಎಲ್ಲಾ ಹಳೆಯ ವಿದ್ಯಾರ್ಥಿಗಳು ಸೇರಬೇಕಿದೆ.
41 ವರ್ಷ ಕಳೆದಿರುವ ಕಾಲೇಜು 30 ಸಾವಿರಕ್ಕೂ ಹೆಚ್ಚು ಮಂದಿಗೆ ಜ್ಞಾನ ಕೊಟ್ಟಿದೆ. ಸಂಚಾಲಕ ಸಮಿತಿ ರಚನೆ ಮಾಡಿದ್ದು ಎಲ್ಲರ ಸಂಪರ್ಕ ಮಾಡುವ ಕೆಲಸ ಶುರುವಾಗಲಿದೆ.