Categories
ತೀರ್ಥಹಳ್ಳಿ

ತೀರ್ಥಹಳ್ಳಿ ಪ. ಪಂ ಅಧ್ಯಕ್ಷರ ಅಧಿಕಾರ ಸ್ವೀಕಾರ

ತೀರ್ಥಹಳ್ಳಿ ಪ. ಪಂ ಅಧ್ಯಕ್ಷರ ಅಧಿಕಾರ ಸ್ವೀಕಾರ
– ನೂತನ ಅಧ್ಯಕ್ಷರಾದ ರಹಮತ್ ಉಲ್ಲಾ ಅಸಾದಿ, ಉಪಾಧ್ಯಕ್ಷರಾದ ಗೀತಾ ರಮೇಶ್ ಅಧಿಕಾರ ಸ್ವೀಕಾರ
– ಕವಲೇದುರ್ಗ ಮಠದ ಶ್ರೀಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮ

NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾದ ರಹಮತ್ ಉಲ್ಲಾ ಅಸಾದಿ, ಉಪಾಧ್ಯಕ್ಷರಾದ ಗೀತಾ ರಮೇಶ್ ಗೌರಿ ಹಬ್ಬದ ದಿನವಾದ ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ತೀರ್ಥಹಳ್ಳಿ ಪಟ್ಟಣ ಪಂಚಾಯ್ತಿ ಕಾರ್ಯಾಲಯದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ಪ್ರಮುಖರಾದ ಕಲಗೋಡು ರತ್ನಾಕರ್, ಮಂಜುನಾಥ್ ಕೆಸ್ತೂರು, ಮುಡುಬ ರಾಘವೇಂದ್ರ, ಧರ್ಮೇಶ್, ಪಟ್ಟಣ ಪಂಚಾಯತ್ ಸದಸ್ಯರು ಸೇರಿದಂತೆ ಹಲವು ಪ್ರಮುಖರು ಇದ್ದರು.
ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಎಲ್ಲಾ ಗಣ್ಯರಿಗೆ ಸನ್ಮಾನಿಸಿದರು.

ಕವಲೇದುರ್ಗ ಮಠದ ಶ್ರೀಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮ

ಕವಲೇದುರ್ಗ ಮಠದ ಶ್ರೀಗಳು ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ತೀರ್ಥಹಳ್ಳಿ ರಾಜಕಾರಣದಲ್ಲಿ ಆರಗ ಜ್ಞಾನೇಂದ್ರ, ಕಿಮ್ಮನೆ ರತ್ನಾಕರ್ ಮತ್ತು ಮಂಜುನಾಥ ಗೌಡ ಅಮೂಲ್ಯ ಮುತ್ತುಗಳು. ಅವರ ಗರಡಿಯಲ್ಲಿ ಬೆಳೆದ ಈ ಇಬ್ಬರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.