ತೀರ್ಥಹಳ್ಳಿ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಾಧನೆ
– ಶೇ.100 ಫಲಿತಾಂಶ: ಅತ್ಯುತ್ತಮ ಗುಣಮಟ್ಟದ ಶಿಕ್ಷಣ
– ಶೃಂಗಾ ವಿ ಮತ್ತು ಆನಾಂ ಶೇಕ್ ಶಾಲೆಗೆ ಟಾಪರ್
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ತೀರ್ಥಹಳ್ಳಿ: ತೀರ್ಥಹಳ್ಳಿ ತಾಲೂಕಿನ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2025–26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ. ಶಾಲೆಯ ಒಟ್ಟು ಫಲಿತಾಂಶದಲ್ಲಿ 16 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ (Distinction), 25 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 05 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ ಒಬ್ಬ ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಶೃಂಗಾ ವಿ ಮತ್ತು ಆನಾಂ ಶೇಕ್ ಶಾಲೆಗೆ ಟಾಪರ್
ವಿದ್ಯಾರ್ಥಿನಿ ಶೃಂಗಾ ವಿ ಮತ್ತು ಆನಾಂ ಶೇಕ್ ತಲ 610 ಅಂಕಗಳನ್ನು ಪಡೆಯುವ ಮೂಲಕ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಶ್ರದ್ದಾ ರಾಯ್ ಎಲ್ ಆರ್ 608 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಹಾಗೂ ತೃತೀಯ ಸ್ಥಾನ ಶ್ರೇಯ ಭಜಂತ್ರಿ 600 ಅಂಕಗಳನ್ನು ಪಡೆದಿದ್ದಾರೆ. ಗುಣಮಟ್ಟದ ಶಿಕ್ಷಣ ಜೊತೆಗೆ ಕಂಪ್ಯೂಟರ್, ಯೋಗ ಮತ್ತು ಕ್ರೀಡಾ ಚಟುವಟಿಕೆಗಳಿಗೆ ಒತ್ತು ನೀಡುತ್ತಿರುವ ಶಾಲೆಯು ಈ ಬಾರಿ ‘ಎ’ ಶ್ರೇಣಿಯ ಸಾಧನೆ ಮಾಡಿದೆ. ಯಶಸ್ಸಿಗೆ ಕಾರಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಹಾಗೂ ಮಾರ್ಗದರ್ಶನ ನೀಡಿದ ಶಿಕ್ಷಕ ವೃಂದವನ್ನು ಶಾಲಾ ಆಡಳಿತ ಮಂಡಳಿ ಅಭಿನಂದಿಸಿದೆ.








