ಟಾಪ್ 2 ನ್ಯೂಸ್ ತೀರ್ಥಹಳ್ಳಿ
ತೀರ್ಥಹಳ್ಳಿಯ ಗ್ರಾಮ ಸಹಾಯಕ ಅನಾರೋಗ್ಯದಿಂದ ನಿಧನ !
– ತೀರ್ಥಹಳ್ಳಿ : ಕುಶಾವತಿಯ ತುಂಗಾ ನದಿಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ..!!
NAMMUR EXPRESS NEWS
ತೀರ್ಥಹಳ್ಳಿ : ತೀರ್ಥಮುತ್ತೂರು ಗ್ರಾಮದಲ್ಲಿ ಗ್ರಾಮ ಸಹಾಯಕನಾಗಿ ಸೇವೆ ಸಲ್ಲಿಸುತ್ತಿದ್ದ ಮಧು (38 ವರ್ಷ ) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಹೆಗ್ಗೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಟ್ಟಗೆರಿ ನಿವಾಸಿ ಮಧು ಕಳೆದ 10 ವರ್ಷಗಳಿಂದ ಗ್ರಾಮ ಸಹಾಯಕನಾಗಿ ಕೆಲಸ ನಿರ್ವಹಿಸುತ್ತಿದ್ದರು. ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಮಧುರವರ ಅಕಾಲಿಕ ನಿಧನಕ್ಕೆ ತಹಸೀಲ್ದಾರ್ ರಂಜಿತ್ ಎಸ್, ಹಾಗೂ ತಾಲೂಕು ಕಚೇರಿ ಸಿಬ್ಬಂದಿಗಳು ಸಂತಾಪ ಸೂಚಿಸಿದ್ದಾರೆ.
– ತೀರ್ಥಹಳ್ಳಿ : ಕುಶಾವತಿಯ ತುಂಗಾ ನದಿಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ..!!
ತೀರ್ಥಹಳ್ಳಿ : ಕುಶಾವತಿಯ ತುಂಗಾ ನದಿಯಲ್ಲಿ ಅನಾಮಧೇಯ ಶವವೊಂದು ಪತ್ತೆಯಾಗಿದ್ದು ಯಾರು ಎಂಬುದರ ಬಗ್ಗೆ ತಿಳಿದು ಬಂದಿಲ್ಲ. ಸ್ಥಳದಲ್ಲಿ ಪೊಲೀಸರು ಇದ್ದು ಅನಾಮಧೇಯ ವ್ಯಕ್ತಿ ಅಂದಾಜು 30 ರಿಂದ 35 ವರ್ಷದ ಒಳಗಿನ ವ್ಯಕ್ತಿ ಎಂದು ತಿಳಿದು ಬಂದಿದೆ. ಈ ವ್ಯಕ್ತಿಯ ಬಗ್ಗೆ ತಿಳಿದವರು ತೀರ್ಥಹಳ್ಳಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ತಿಳಿಸಿದೆ.
