ಮಲ್ನಾಡ್ ಟಾಪ್ ನ್ಯೂಸ್..!
– ತೀರ್ಥಹಳ್ಳಿ: ಸರ್ಕಾರಿ ಆಸ್ಪತ್ರೆಯ ವೈದ್ಯರ ಮನೆಯಲ್ಲಿ ಕಳ್ಳತನ.!
– ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಟೆಂಡರ್
– ಹೋಟೆಲ್ ನಲ್ಲಿ ಗ್ರಾಹಕರ ಹಣದ ಬ್ಯಾಗ್ ಲಪಟಾಯಿಸಿದ ಸರ್ವರ್
NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ತಾಲೂಕಿನ ಯೋಗಿಮಳಲಿ ಸರ್ಕಾರಿ ಆಸ್ಪತ್ರೆ ವೈದ್ಯರಾದ ಡಾ.ಕಾರ್ತಿಕ್ ಅವರ ಮನೆಯಲ್ಲಿ ಕಳ್ಳತನವಾಗಿದೆ. ಯೋಗಿಮಳಲಿಯ ಸಿ.ಕೆ ಸರ್ಕಲ್ ಹತ್ತಿರ ಮನೆಯಲ್ಲಿ ವಾಸವಾಗಿದ್ದು, ಜೂ.6ರ ರಾತ್ರಿ ಮನೆಯಲ್ಲಿದ್ದ ನಗದು ಮತ್ತು ಬಂಗಾರ ಕಳ್ಳತನವಾಗಿದೆ. ಹಾಗೂ ಇದೇ ದಿನ ರಾತ್ರಿ ಕೋಣಂದೂರು ಸಿ.ಕೆ ಸರ್ಕಲ್ನಲ್ಲಿ ಬೈಕ್ ಸಹ ಕಳ್ಳತನವಾಗಿದೆ.
ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಸಾಗರ ತಾಲೂಕು ಕಚೇರಿ ಅಟೆಂಡರ್!
ಶಿವಮೊಗ್ಗ: ಲಂಚ ಸ್ವೀಕರಿಸುವ ವೇಳೆ ಅಟೆಂಡರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಸಾಗರ ತಾಲೂಕು ಕಚೇರಿಯ ದಾಖಲಾತಿ ವಿಭಾಗದ ಆರ್.ಆರ್.ಟಿ ಶಾಖೆಯ ಅಟೆಂಡರ್ ಬಸವರಾಜ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ ಎಂದು ಗುರುತಿಸಲಾಗಿದೆ. ಸಾಗರದ ಬಳಸಗೋಡು ಗ್ರಾಮದ ವ್ಯಕ್ತಿಯೊಬ್ಬರ ಜಮೀನಿನ ಆರ್.ಟಿ.ಸಿ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಿತ್ತು. ಅವರ ಸ್ನೇಹಿತ ಅಸೀಬ್ ಎನ್ನುವವರು ತಾಲೂಕು ಕಚೇರಿಗೆ ತೆರಳಿ ಅಟೆಂಡರ್ ಬಸವರಾಜ್ ಅವರ ಬಳಿ ಆರ್ಟಿಸಿಗೆ ಬೇಡಿಕೆ ಇಟ್ಟಿದ್ದರು. ಮೊದಲು ಬಸವರಾಜ್ ದಾಖಲಾತಿ ಜೆರಾಕ್ಸ್ ಹಾಗೂ ಚಲನ್ಗೆ 1500 ರೂ ಲಂಚ ಸ್ವೀಕರಿಸಿದ್ದಾರೆ. ಈ ವೇಳೆ ಶಿರಸ್ತೆದಾರರಿಗೆ ನೀಡಲು ಮತ್ತೆ 2,000 ಡಿಮ್ಯಾಂಡ್ ಮಾಡಿದ್ದಾರೆ. ಮೊದಲು ಲಂಚ ನೀಡುವಾಗ ವಿಡಿಯೋ ಮಾಡಿ ಇಟ್ಟುಕೊಂಡಿದ್ದ ದೂರುದಾರ ಬಳಿಕ ಮತ್ತೆ ಲಂಚ ನೀಡುವ ಮೊದಲು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಅಟೆಂಡರ್ ಬಸವರಾಜ್ 2000 ರೂಪಾಯಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಆರೋಪಿ ಬಸವರಾಜ್ನನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.
ಹೋಟೆಲ್ ನಲ್ಲಿ ಗ್ರಾಹಕರ ಹಣದ ಬ್ಯಾಗ್ ಲಪಟಾಯಿಸಿದ ಸರ್ವರ್
ಶಿವಮೊಗ್ಗ: ಶಿವಮೊಗ್ಗ ನಗರದ ಬೈಟ್ ಹೊಟೆಲಿನಲ್ಲಿ ಗ್ರಾಹಕ ಬಿಟ್ಟು ಹೋದ 4 ಲಕ್ಷ ರೂ. ಇದ್ದ ಹಣದ ಚೀಲವನ್ನು ಅಲ್ಲಿನ ಸರ್ವರ್ ಎತ್ತಿಕೊಂಡು ಹೋದ ಘಟನೆ ಸಂಭವಿಸಿದ್ದು, ಆತನನ್ನು ಬಂಧಿಸಿ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಗರ ತಾಲೂಕು ಜಂಬಾನಿ ಗ್ರಾಮದ ವಾಸಿ ಲೋಕೇಶ್ ಎನ್ನುವವರು ತನ್ನ ಸ್ನೇಹಿತನೊಂದಿಗೆ ಹೋಟೇಲ್ ನಲ್ಲಿ ಊಟ ಮಾಡುತ್ತಿದ್ದಾಗ 4 ಲಕ್ಷ ರೂ. ಇದ್ದ ಚೀಲವನ್ನು ಟೇಬಲ್ ಮೇಲೆ ಇಟ್ಟಿದ್ದರು.
ಅವಸರದಲ್ಲಿ ಚೀಲವನ್ನು ಅಲ್ಲಿಯೇ ಬಿಟ್ಟು ಹೋಗಿದ್ದರು. ಸ್ವಲ್ಪ ಸಮಯದ ನಂತರ ಕಾರಿನಲ್ಲಿ ಬ್ಯಾಗ್ ಇಲ್ಲದೇ ಇರುವುದು ಕಂಡುಬಂದಿದ್ದು, ವಾಪಾಸ್ ಹೋಟೇಲ್ ಗೆ ಬಂದು ಸಿಸಿ ಕ್ಯಾಮರಾ ಪರಿಶೀಲನೆ ಮಾಡಿದಾಗ ಹೋಟೇಲ್ ನಲ್ಲಿ ಸರ್ವರ್ ಕೆಲಸ ಮಾಡುವ ಹೇಮಂತ್ ಕುಮಾರ್ ಎಂಬುವವನು ಬ್ಯಾಗ್ ನ್ನು ತೆಗೆದು ನೋಡಿ ಸ್ಟೋರ್ ರೂಮಿನಲ್ಲಿ ಇಡುವ ದೃಶ್ಯಾವಳಿ ಕಂಡುಬಂದಿತು. ಪೋನ್ ಮಾಡಿ ಆತನಿಗೆ ಹಣದ ಬ್ಯಾಗ್ ನ ಬಗ್ಗೆ ವಿಚಾರ ಮಾಡಿದಾಗ ಯಾವುದೇ ಬ್ಯಾಗ್, ನಗದು ಹಣ ನಾನು ತೆಗೆದುಕೊಂಡಿಲ್ಲವೆಂದು ಹೇಳಿ ಫೋನ್ ಕಟ್ ಮಾಡಿದ್ದನು. ಅಲ್ಲದೆ ಬೆಳಿಗ್ಗೆ ಹೊಟೇಲ್ ನ ಕೆಲಸಕ್ಕೂ ಕೂಡ ಬಂದಿಲಯರಲಿಲ್ಲ. ಆದ್ದರಿಂದ ನಗದು ಹಣ ಕಳ್ಳತನ ಮಾಡಿಕೊಂಡು ಹೋದ ಹೇಮಂತ್ ಕುಮಾರ್ ಈತನ ಮೇಲೆ ಪ್ರಕರಣ ದಾಖಲಿಸಿದ್ದರು.