Categories
ತೀರ್ಥಹಳ್ಳಿ

ಸಂಯುಕ್ತ ಮುಸ್ಲಿಂ ಒಕ್ಕೂಟದ ದಶಮಾನೋತ್ಸವ ಸಂಭ್ರಮ!

ಸಂಯುಕ್ತ ಮುಸ್ಲಿಂ ಒಕ್ಕೂಟದ ದಶಮಾನೋತ್ಸವ ಸಂಭ್ರಮ!
– ಜ.7ರಂದು ತೀರ್ಥಹಳ್ಳಿಯಲ್ಲಿ ಕಾರ್ಯಕ್ರಮ: ಸಮಾರಂಭ-ಪ್ರತಿಭಾ ಪುರಸ್ಕಾರ
– ಸ್ಪೀಕರ್ ಯು.ಟಿ.ಖಾದರ್, ಸಚಿವರಾದ ಮಧುಬಂಗಾರಪ್ಪ, ರಹೀಂಖಾನ್ ಆಗಮನ

NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ತಾಲ್ಲೂಕು ಸಂಯುಕ್ತ ಮುಸ್ಲಿಂ ಒಕ್ಕೂಟದ ದಶಮಾನೋತ್ಸವ ಸಮಾರಂಭ ಜನವರಿ 7ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ತೀರ್ಥಹಳ್ಳಿ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಆಯೋಜನೆಗೊಂಡಿದೆ. ದಶಮಾನೋತ್ಸವದ ಅಂಗವಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ನೆರವೇರಿಸಲಾಗುತ್ತದೆ. ಒಕ್ಕೂಟದ ಅಧ್ಯಕ್ಷ ಹಾಜಿ ಸುಲೇಮಾನ್ ಸಾಹೇಬ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ವಿಧಾನ ಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಉದ್ಘಾಟನೆ ನೆರವೇರಿಸುವರು.

ಮುಖ್ಯ ಅತಿಥಿಗಳಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪೌರಾಡಳಿತ ಸಚಿವ ರಹೀಂ ಖಾನ್, ಸಂಸದ ಬಿ.ವೈ.ರಾಘವೇಂದ್ರ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಜನಾಬ್ ನಸೀರ್ ಅಹಮ್ಮದ್, ಶಾಸಕರಾದ ಆರಗ ಜ್ಞಾನೇಂದ್ರ, ಬೇಳೂರು ಗೋಪಾಲಕೃಷ್ಣ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆ‌ರ್.ಎಂ.ಮಂಜುನಾಥಗೌಡ, ಪ.ಪಂ.ಅಧ್ಯಕ್ಷೆ ಗೀತಾ ರಮೇಶ್, ಉಪಾಧ್ಯಕ್ಷ ರೆಹಮತ್ ಉಲ್ಲಾ ಅಸಾದಿ, ಸಂಯುಕ್ತ ಮುಸ್ಲಿಂ ಒಕ್ಕೂಟದ ಗೌರವಾಧ್ಯಕ್ಷ ಜನಾಬ್‌ ಹಾಜಿ ಇಬ್ರಾಹಿಂ ಪರೀಫ್, ಡಿವೈಎಸ್ಪಿ ಗಜಾನನ ವಾಮನ ಸುತಾರ ಪಾಲ್ಗೊಳ್ಳುವರು. ಸಂಯುಕ್ತ ಮುಸ್ಲಿಂ ಒಕ್ಕೂಟದ ಜನಾಬ್ ದಸ್ತಗೀರ್ ಖುರೇಷಿ, ಸಂಚಾಲಕರಾದ ನ್ಯಾಷನಲ್‌ನ ಅಬ್ದುಲ್ ರೆಹಮಾನ್ ಗೌರವ ಉಪಸ್ಥಿತರಿರುವರು. ಸಮಾರಂಭಕ್ಕೆ ತೀರ್ಥಹಳ್ಳಿ ತಾಲ್ಲೂಕು ಸಂಯುಕ್ತ ಮುಸ್ಲಿಂ ಒಕ್ಕೂಟದ ಅಧ್ಯಕ್ಷರು ಮತ್ತು ಸದಸ್ಯರು ಸರ್ವರನ್ನೂ ಸ್ವಾಗತಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.