ರಾಷ್ಟ್ರಮಟ್ಟದಲ್ಲಿ ಛಾಪು ಮೂಡಿಸಿದ ವಾಗ್ದೇವಿ ಪಿಯು ಕಾಲೇಜು!
– ಕಬಡ್ಡಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಾಗ್ದೇವಿ ಪಿಯು ಕಾಲೇಜಿನ ಅಮೂಲ್ಯ ಕೆ.ಪಿ
– ಸಾಧಕ ವಿದ್ಯಾರ್ಥಿನಿಗೆ ಅಭಿನಂದನೆ ಸಲ್ಲಿಸಿದ ಆಡಳಿತ ಮಂಡಳಿ
NAMMUR EXPRESS NEWS
ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಪದವಿಪೂರ್ವ ಕಾಲೇಜುಗಳ ಕಬಡ್ಡಿ ಪಂದ್ಯಾವಳಿಯಲ್ಲಿ
ವಾಗ್ದೇವಿ ಕಾಲೇಜಿನ ವಿದ್ಯಾರ್ಥಿನಿಯಾದ ಕುಮಾರಿ ಅಮೂಲ್ಯ ಕೆಪಿ ಇತ್ತೀಚಿಗೆ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಇವರು ತುಮಕೂರು ಜಿಲ್ಲೆಯಲ್ಲಿ ನಡೆಸಿದ ಪದವಿ ಪೂರ್ವ ಕಾಲೇಜುಗಳ 2025-26 ನೇ ಸಾಲಿನ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯಲ್ಲಿ ಅತ್ಯುತ್ತಮವಾಗಿ ಆಟವನ್ನುಪ್ರರ್ಶಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿ ಕೊಂಡ್ಲೂರು ಗ್ರಾಮದ ಕೊಗ್ರಿ ನಿವಾಸಿಗಳಾದ ಶ್ರೀ ಅನ್ನಪೂರ್ಣ ಮತ್ತು ಪೂರ್ಣೇಶ್ ದಂಪತಿಗಳ ಪುತ್ರಿಯಾಗಿದ್ದು ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.
ಇವಳ ಈ ಸಾಧನೆಯನ್ನು ತರ್ಥಹಳ್ಳಿ ತಾಲ್ಲೂಕಿನ ಜನತೆ ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು
ಹಾಗೂ ಸದಸ್ಯರು, ಉಪನ್ಯಾಸಕ ವೃಂದ ಮತ್ತು ಪೋಷಕರು ಅಭಿನಂದಿಸಿ ರಾಷ್ಟ್ರಮಟ್ಟದಲ್ಲಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಳ್ಳಲಿ ಎಂದು ಶುಭ ಹಾರೈಸಿರುತ್ತಾರೆ.
ಅಮೂಲ್ಯ ಸಾಧನೆಗೆ ಶುಭಾಶಯಗಳು








