ತೀರ್ಥಹಳ್ಳಿಯ ಎಲ್ಲೆಡೆ ಬಿರುಸಿನ ಮತದಾನ
– ಪ್ರತಿ ಹಳ್ಳಿ ಹಳ್ಳಿಯಲ್ಲೂ ಮತದಾನದ ಸಂಭ್ರಮ
– ಬಿಜೆಪಿ – ಕಾಂಗ್ರೆಸ್ ಕಾರ್ಯಕರ್ತರ ಸ್ನೇಹ ಮಯ ರಾಜಕೀಯ
NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿಯ ಎಲ್ಲಾ ಕಡೆ ಮತದಾನ ಶಾಂತಿಯುತವಾಗಿ ನಡೆಯಿತು. ದೇವಂಗಿ, ಸಿಂಗನಬಿದಿರೆ, ಸುಳಗೋಡು ಸೇರಿ ತೀರ್ಥಹಳ್ಳಿಯ ಬಹುತೇಕ ಕಡೆ ಶಾಂತಿಯುತವಾಗಿ ಮತದಾನ ನಡೆಯಿತು. ಬೆಳಗಿನಿಂದಲೂ ಚುರುಕಾಗಿ ಆರಂಭವಾದ ಮತದಾನ ಮಧ್ಯಾಹ್ನದ ವೇಳೆಗೆ ನಿಧಾನಗತಿಯಲ್ಲಿ ಸಾಗಿತು. ಬಿಸಿಲಿನ ಬೇಗೆಯಿಂದಾಗಿ ಮಧ್ಯಾಹ್ನ ಮತದಾರರು ಮನೆಯಿಂದ ಹೊರಬರಲಿಲ್ಲ. ಸಂಜೆ ಬಳಿಕ ಮತ್ತೆ ಮತದಾನ ಚುರುಕಾಯಿತು. ಮತಯಂತ್ರಗಳಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಉಂಟಾದ ತಕ್ಷಣ ಅಧಿಕಾರಿಗಳು ಮತಗಟ್ಟೆಗಳಿಗೆ ಧಾವಿಸಿ ತಾಂತ್ರಿಕ ಸಮಸ್ಯೆ ಪರಿಹರಿಸಿ ಸುಗಮ ಮತದಾನಕ್ಕೆ ಅನುವು ಮಾಡಿಕೊಟ್ಟರು.
ಬೆಳಗಿನಿಂದಲೂ ಮತದಾರರು ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡರು. ಮತಕೇಂದ್ರಗಳ ಸಮೀಪ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಕಾರ್ಯಕರ್ತರು ಮತದಾರರನ್ನು ಮನವೊಲಿಸುತ್ತಿದ್ದ ದೃಶ್ಯ ಕಂಡು ಬಂದಿತು. ಮತಚೀಟಿ ನೀಡಿ ತಮ್ಮ ಪಕ್ಷಗಳಿಗೆ ಮತ ನೀಡುವಂತೆ ಮನವಿ ಮಾಡುತ್ತಿದ್ದರು.
ತೀರ್ಥಹಳ್ಳಿ ಪಟ್ಟಣದಲ್ಲಿ ಎಲ್ಲಾ ವಾರ್ಡ್ ಮತದಾನ
ತೀರ್ಥಹಳ್ಳಿ ಪಟ್ಟಣದ ಎಲ್ಲಾ ವಾರ್ಡ್ ಅಲ್ಲೂ ಉತ್ತಮ ಮತದಾನವಾಗಿದೆ. ವಾರ್ಡ್ ಸದಸ್ಯರು, ನಾಯಕರು, ಮುಖಂಡರು, ಕಾರ್ಯಕರ್ತರು ಮತ ಹಾಕಿಸಿದರು.