ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷರು ಯಾರಾಗ್ತಾರೆ?
– ಅಧ್ಯಕ್ಷ ಸ್ಥಾನಕ್ಕೆ ಅಸಾದಿ ರಾಜೀನಾಮೆ: ಈಗ ಮತ್ತೊಬ್ಬರಿಗೆ ಅವಕಾಶ
– ಜಯಪ್ರಕಾಶ್ ಶೆಟ್ಟಿ, ರತ್ನಾಕರ್ ಶೆಟ್ಟಿ ಹೆಸರು ಮುಂಚೂಣಿ
NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ರಹಮತ್ ಉಲ್ಲಾ ಅಸಾದಿ ರಾಜೀನಾಮೆ ನೀಡಿದ್ದಾರೆ. ಇದೀಗ ಹಿರಿಯ ಸದಸ್ಯರಾದ ಜಯಪ್ರಕಾಶ್ ಶೆಟ್ಟಿ ಮತ್ತು ತಮ್ಮ ಸೇವೆ ಮೂಲಕವೇ ಜನ ಮನ್ನಣೆ ಗಳಿಸಿರುವ ರತ್ನಾಕರ್ ಶೆಟ್ಟಿ ( ದತ್ತಣ್ಣ) ಅವರ ಹೆಸರು ಅಧ್ಯಕ್ಷ ಸ್ಥಾನಕ್ಕೆ ಕೇಳಿ ಬರುತ್ತಿದೆ.
ಶಿವಮೊಗ್ಗ ಉಪ ವಿಭಾಗ ಅಧಿಕಾರಿಗೆ ರಾಜೀನಾಮೆ ಪತ್ರ ನೀಡಿರುವ ರಹಮದ್ ಉಲ್ಲಾ ಅಸಾದಿ ಕಳೆದ ಒಂದು ವರ್ಷದಿಂದ ಪಟ್ಟಣ ಪಂಚಾಯಿತಿಯಲ್ಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು ಈಗ ಸದರಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ಅವರ ರಾಜೀನಾಮೆ ಅಂಗೀಕಾರ ಆಗಬೇಕಿದೆ. ಮುಂದಿನ ಅಧ್ಯಕ್ಷ ಸ್ಥಾನ ಹಾಗೂ ಅಸಾದಿ ಅವರ ಮುಂದಿನ ನಡೆ ತೀವ್ರ ಕುತೂಹಲ ಮೂಡಿಸಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅಮೇರಿಕಾಕ್ಕೆ ಪ್ರಯಾಣ ಬೆಳೆಸುತ್ತಿದ್ದು ಅವರು ವಾಪಾಸ್ ಬಂದ ತಕ್ಷಣ ಹೆಸರು ಅಂತಿಮ ಆಗುವ ಸಾಧ್ಯತೆ ಇದೆ. ಇನ್ನು ಪತ್ರಕರ್ತರು, ಹಿರಿಯ ನಾಯಕರು ಆದ ಗಣಪತಿ ಅವರ ಹೆಸರು ಕೂಡ ಚರ್ಚೆಯಲ್ಲಿದೆ.
ತೀರ್ಥಹಳ್ಳಿ ಪಟ್ಟಣದಲ್ಲಿ ಹಲವು ಅಭಿವೃದ್ಧಿ ಕಾರ್ಯ ಮಾಡುವ ಮೂಲಕ ಅಸಾದಿ ಜನಪರ ನಾಯಕರಾಗಿ ಹೊರ ಹೊಮ್ಮಿದ್ದಾರೆ. ತಮ್ಮ ವಿಶೇಷ ಯೋಜನೆ ಯೋಚನೆ ಮೂಲಕ ತೀರ್ಥಹಳ್ಳಿ ಪಟ್ಟಣ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಿದ್ದಾರೆ.