- ಅಕ್ಟೋಬರ್ 25ರಿಂದ ಸೇವೆ ಪ್ರಾರಂಭಕ್ಕೆ ಸಿದ್ಧತೆ
ಮೈಸೂರು: ಮಂಗಳೂರಿನಿಂದ ಮೈಸೂರಿಗೆ ವಿಮಾನ ಸೇವೆ ಪ್ರಾರಂಭಿಸಲು ಏರ್ ಇಂಡಿಯಾ ನಿರ್ಧರಿಸಿದೆ.
ಟ್ರಯಲ್ ರನ್ ನಂತರ ಕಾರ್ಯಸಾಧ್ಯತಾ ವರದಿಯನ್ನು ಆಧರಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಅಕ್ಟೋಬರ್ 25ರಿಂದ ಸೇವೆ ಪ್ರಾರಂಭವಾಗುವ ಸಾಧ್ಯತೆ ಇದೆ.ಈಗ ರಸ್ತೆ ಮತ್ತು ರೈಲು ಮೂಲಕ ಸಂಪರ್ಕ ಹೊಂದಿರುವ ಈ ಎರಡು ನಗರಗಳ ನಡುವೆ ವಿಮಾನ ಸೇವೆ ಪ್ರಾರಂಭಿಸುವಂತೆ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಮತ್ತುಕೆಲವು ಕೈಗಾರಿಕೋದ್ಯಮಿಗಳು ವೈಮಾನಿಕ ಸಂಸ್ಥೆಗೆ ಮನವಿ ಮಾಡಿದ್ದರು. ಏರ್ ಇಂಡಿಯಾ ಬೆಂಗಳೂರಿನಿಂದ ಮಂಗಳುರಿಗೆ ಬೆಳಿಗ್ಗೆ 6.50ಕ್ಕೆ ಬರುವ ವಿಮಾನವನ್ನೇ ಮೈಸೂರಿನ ಕಡೆ ತಿರುಗಿಸುವ ಸೂಚನೆ ಇದೆ. ಈ ವಿಮಾನ ಬೆಳಿಗ್ಗೆ 7.55ಕ್ಕೆ ಮೈಸೂರಿನಿಂದ ಹೊರಟು ಬೆಳಿಗ್ಗೆ 8.50ಕ್ಕೆ ಮಂಗಳೂರು ತಲುಪಲಿದೆ ಎಂದು ಹೇಳಲಾಗಿದೆ.