- ಮೋದಿ ಮಾತು ಬಳಿಕ ವಿವಿಗೆ ಅವಕಾಶ
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯ ಕಂಪ್ಯೂಟರ್ ಸೈನ್ಸ್ ವಿಭಾಗದ ಜೊತೆಗೆ ದೈತ್ಯ ಐಟಿ ಸಂಸ್ಥೆಗಳಾದ ಐಬಿಎಂ ಹಾಗೂ ಗೂಗಲ್ ಒಡಂಬಡಿಕೆಗೆ ಮುಂದಾಗಿದೆ. ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಗೆ ಪೂರಕವಾಗುವ ನಿಟ್ಟಿನಲ್ಲಿ ಈ ಸಂಸ್ಥೆಗಳು ಕಾರ್ಯೋನ್ಮುಖವಾಗಲಿವೆ .ಮೈಸೂರು ವಿವಿ 100ನೇ ಘಟಿಕೋತ್ಸವ ಕಾರ್ಯಕ್ರಮದ ಪ್ರಧಾನ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯಂತೆ ವಿವಿಯ ಎಲ್ಲಾ ವಿಭಾಗಗಳು ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ವಿಭಾಗಕ್ಕೆ ಸಂಬಂಧಿಸಿದ ಉದ್ಯಮಗಳೊಂದಿಗೆ ಸಂಪರ್ಕ ಸಾಧಿಸುವುದು ಅಗತ್ಯವಾಗಿದೆ ಎಂದು ಮೈಸೂರು ವಿವಿ ಕುಲಪತಿ ಪೆÇ್ರ.ಜಿ.ಹೇಮಂತ್ ಕುಮಾರ್ ತಿಳಿಸಿದರು.
ವಿಭಾಗಕ್ಕೆ ಸಂಬಂಧಿಸಿದ ಉದ್ಯಮಗಳ ಸಂಪರ್ಕದಿಂದ ಉದ್ಯೋಗ ಸೇರಿದಂತೆ ಕೌಶಲ್ಯಾಭಿವೃದ್ಧಿಗೆ ಉಪಯೋಗವಾಗಲಿದೆ. ಈ ನಿಟ್ಟಿನಲ್ಲಿ ಎಲ್ಲಾ ವಿಭಾಗಗಳು ತಮ್ಮ ವಿಭಾಗಕ್ಕೆ ಸಂಬಂಧಿಸಿದ ಉದ್ಯಮಗಳ ಸಂಪರ್ಕ ಸಾಧಿಸಬೇಕು ಎಂದಿದ್ದಾರೆ.