-ಜ.21 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ ಸಮಿತಿ
-ಸೋಶಿಯಲ್ ಮೀಡಿಯಾ ದುರುಪಯೋಗ ವಿಚಾರ
ಡಿಜಿಟಲ್ ಡೆಸ್ಕ್ : ಸೋಶಿಯಲ್ ಮೀಡಿಯಾ ದುರುಪಯೋಗದ ವಿಚಾರವಾಗಿ ವಿಚಾರಣೆಗೆ ಹಾಜರಾಗುವಂತೆ ಫೇಸ್ ಬುಕ್ ಮತ್ತು ಟ್ವಿಟರ್ ಅಧಿಕಾರಿಗಳಿಗೆ ಭಾರತದ ಸಂಸದೀಯ ಸಮಿತಿ ಸಮನ್ಸ್ ನೀಡಿದೆ.
ಐಟಿ ಕುರಿತ ಸಂಸದೀಯ ಸ್ಥಾಯಿ ಸಮಿತಿ ಜನವರಿ 21 ರಂದು ಫೇಸ್ಬುಕ್ ಮತ್ತು ಟ್ವಿಟರ್ ಅಧಿಕಾರಿಗಳನ್ನು ವಿಚಾರಣೆಗೆ ಹಾಜರಾಗುವಂತೆ ಸಮಿತಿ ತಿಳಿಸಿದ್ದು,
ಐಟಿ ಕುರಿತ ಸಂಸದೀಯ ಸಮಿತಿಯು ರಾಜಕೀಯ ಲಾಭಕ್ಕಾಗಿ ಫೇಸ್ಬುಕ್ ಅನ್ನು ದುರುಪಯೋಗಪಡಿಸಿಕೊಂಡ ಆರೋಪವನ್ನು ಗಮನಿಸುತ್ತಿತ್ತು. ಈ ಹಿನ್ನೆಲೆ ವಿಚಾರಣೆಗೆ ಹಾಜರಾಗುವಂತೆ ಫೇಸ್ಬುಕ್ ಮತ್ತು ಟ್ವಿಟರ್ ಅಧಿಕಾರಿಗಳನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.