- ನ.20ರಂದು ದೇವರ ದರ್ಶನ ಮಧ್ಯಾಹ್ನದಿಂದ ಇರಲ್ಲ
- ನ. 23ರಂದು ಲಕ್ಷದೀಪೋತ್ಸವ ಸಂಭ್ರಮ
- ಕುಕ್ಕೆ ಭಜನೋತ್ಸವದಲ್ಲಿ ಭಾಗವಹಿಸಲು ಅವಕಾಶ
NAMMUR EXPRESS NEWS
ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವೆಂಬರ್ 20 ರಂದು ಬೆಳಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೂ ದರ್ಶನವನ್ನು ನಿರ್ಬಂಧಿಸಲಾಗಿದೆ. ನವೆಂಬರ್ 20ರಂದು ಚಂಪಾಷಷ್ಠಿ ವಾರ್ಷಿಕ ಮೂಲಮೃತ್ತಿಕೆಯ ಪ್ರಸಾದ ತೆಗೆಯುವ ಆಚರಣೆ ನಡೆಸಲಾಗುತ್ತದೆ. ಈ ಕಾರಣಕ್ಕೆ ನವೆಂಬರ್ 20ರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ದರ್ಶನ ಇರುವುದಿಲ್ಲ. ಮಧ್ಯಾಹ್ನ 2 ಗಂಟೆಯ ನಂತರವಷ್ಟೇ ದೇವರ ದರ್ಶನ ಲಭ್ಯವಾಗಲಿದೆ.
ಚಂಪಾಷಷ್ಠಿ ಕೊರೋನ ಹಿನ್ನೆಲೆಯಲ್ಲಿ ಕಳೆದೆರಡು ವರ್ಷಗಳಿಂದ ನಿರ್ಬಂಧಿಸಲಾಗಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿನ ಚಂಪಾ ಷಷ್ಠಿಯ ಎಡೆಸ್ನಾನ ಸೇವೆಗೆ ಈ ಬಾರಿ ಅವಕಾಶ ನೀಡಲಾಗಿದೆ.
ಬೀದಿ ಉರುಳು ಸೇವೆ ಮಾಡುವವರಿಗೆ ಅವಕಾಶ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ನವೆಂಬರ್ 21ರಿಂದ ನಡೆಯಲಿರುವ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಬೀದಿ ಉರುಳು ಸೇವೆ ಮಾಡುವವರಿಗೆ ಲಕ್ಷ ದೀಪೋತ್ಸವ ದಿನದಂದು ರಾತ್ರಿ ರಥೋತ್ಸವದ ಬಳಿಕ ಸಂಜೆ 5ರಿಂದ ಬೆಳಗ್ಗೆ 6 ಗಂಟೆವರೆಗೆ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆದಿದೆ.
ನವೆಂಬರ್ 23ರಂದು ನಡೆಯಲಿರುವ ಲಕ್ಷದೀಪೋತ್ಸವ ಸಮಯದಲ್ಲಿ ಕುಣಿತಾ ಭಜನೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಸುಮಾರು ಒಂದು ಸಾವಿರ ತಂಡಗಳು ಕುಣಿಯುತ್ತಾ ನಡೆಸುವ ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಹೊಂದಲಾಗಿದೆ. ಅದಕ್ಕಾಗಿ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಆಸಕ್ತ ತಂಡಗಳು ಭಜನಾ ಕುಣಿತದಲ್ಲಿ ಭಾಗವಹಿಸಲು ಹೆಸರನ್ನು ನೋಂದಾಯಿಸಿ ಕೊಳ್ಳಬಹುದಾಗಿದೆ.
ಕುಣಿತಾ ಭಜನೋತ್ಸವದಲ್ಲಿ ಸುಮಾರು 1,000 ತಂಡಗಳು ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ. ರಾಜ್ಯಾದ್ಯಂತ ಭಕ್ತರು ಸೇವೆ ನೆರವೇರಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಪ್ರತಿಯೊಂದು ತಂಡದಲ್ಲಿ ಗರಿಷ್ಟ 10 ಮಂದಿಗಷ್ಟೇ ಅವಕಾಶವಿರಲಿದೆ. ಕುಣಿತಾ ಭಜನೋತ್ಸವದಲ್ಲಿ ಪಾಲ್ಗೊಳ್ಳುವ ಆಸಕ್ತರಿರುವ ತಂಡಗಳು ನವೆಂಬರ್ 20ರ ಒಳಗಾಗಿ ಕುಕ್ಕೆ ದೇಗುಲದ ಕಚೇರಿಯಲ್ಲಿ ಹೆಸರು ನೋಂದಾಯಿಸಬೇಕಾಗುತ್ತದೆ.