ಶಿವಮೊಗ್ಗದ ಇಬ್ಬರು ವಿದ್ಯಾರ್ಥಿಗಳು ಉಕ್ರೇನ್ ದೇಶದಲ್ಲಿದ್ದು, ಆತಂಕಕ್ಕೆ ಕಾರಣವಾಗಿದೆ. ವಿದ್ಯಾರ್ಥಿಗಳ ಪೋಷಕರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ತಮ್ಮ ಮಕ್ಕಳ ಸುರಕ್ಷಿತವಾಗಿ ಹಿಂದಕ್ಕೆ ಕರೆಯಿಸಿಕೊಳ್ಳುವ ಕುರಿತು ಮನವಿ ಮಾಡಿದ್ದಾರೆ.
ಶಿವಮೊಗ್ಗದ ಸಂತೆ ಕಡೂರು ಗ್ರಾಮದ ತೇಜಸ್, ಉಕ್ರೇನ್ ದೇಶದಲ್ಲಿ ಎಂಬಿಬಿಎಸ್ ಪದವಿ ಓದುತ್ತಿದ್ದಾರೆ. ಯುದ್ಧ ಆರಂಭದ ಬೆನ್ನಿಗೆ ತೇಜಸ್, ಶಿವಮೊಗ್ಗದಲ್ಲಿರುವ ತಂದೆ ಜಗದೀಶ್, ತಾಯಿ ದೇವಕಿ ಅವರಿಗೆ ವಿಡಿಯೋ ಕಾಲ್ ಮಾಡಿದ್ದಾರೆ. ತಾವು ಸುರಕ್ಷಿತವಾಗಿ ಇರುವುದಾಗಿ ತಿಳಿಸಿದ್ದಾರೆ.
ಉಕ್ರೇನ್ ದೇಶದಲ್ಲಿ ಶಿವಮೊಗ್ಗ ಜಿಲ್ಲೆಯ ಮೂವರು ಇದ್ದಾರೆ ಅನ್ನುವ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ. ರಾಯಭಾರ ಕಚೇರಿ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿದ್ದೇನೆ. ವಿಮಾನಯಾನ ಸೇವೆ ಪುನಾರಂಭ ಆಗುತ್ತಿದ್ದಂತೆ ಎಲ್ಲರನ್ನು ಸುರಕ್ಷಿತವಾಗಿ ಹಿಂದಕ್ಕೆ ಕರೆಯಿಸಿಕೊಳ್ಳುತ್ತೇವೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಶಿವಮೊಗ್ಗ ಜಿಲ್ಲೆಯ ಮತ್ತಷ್ಟು ಮಂದಿ ವಿದ್ಯಾಭ್ಯಾಸಕ್ಕಾಗಿ
ಉಕ್ರೇನ್ ದೇಶಕ್ಕೆ ತೆರಳಿರುವ ಸಾಧ್ಯತೆ ಇದೆ. ಯಾರೆಲ್ಲೆ ಅಲ್ಲಿಗೆತೆರಳಿದ್ದಾರೆ ಅನ್ನುವ ಕುರಿತು ರಾಜ್ಯ ಸರ್ಕಾರ ಮಾಹಿತಿ ಪಡೆದುಕೊಳ್ಳುತ್ತಿದೆ.
Related Posts
Add A Comment