-ಬಿ. ಎಸ್. ಚಂದ್ರಶೇಖರ್ ಆರೋಗ್ಯದಲ್ಲಿ ಏರುಪೇರು
-ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ
ಬೆಂಗಳೂರು: ಟೀಂ ಇಂಡಿಯಾದ ಮಾಜಿ ಆಟಗಾರ ಬಿ.ಎಸ್.ಚಂದ್ರಶೇಖರ್ ಅನಾರೋಗ್ಯ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸುದ್ದಿ ಸಂಸ್ಥೆ ಎಎನ್ ಐ ಈ ಬಗ್ಗೆ ವರದಿ ಮಾಡಿದ್ದು, ಚಂದ್ರಶೇಖರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಲ್ಲಿ ತಿಳಿಸಿದೆ.
75 ವರ್ಷದ ಪ್ರಾಯದ ಬಿ.ಎಸ್. ಚಂದ್ರಶೇಖರ್ ಅವರು ಮೈಸೂರು ಮೂಲದವರಾಗಿದ್ದು, ಲೆಗ್ ಸ್ಪಿನ್ನರ್ ಆಗಿದ್ದ ಅವರು 1964ರಿಂದ 1979ರವರೆಗೆ ಭಾರತ ತಂಡವನ್ನು ಪ್ರತಿನಿಧಿಸಿದ್ದರು.