ಡೈಮಂಡ್ ಲೀಗ್ ಟ್ರೋಫಿ ಗೆದ್ದ ಚೋಪ್ರಾ!
– ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ನೀರಜ್ ಚೋಪ್ರಾ ಪಾತ್ರ
– ಭಾರತದ ಕೀರ್ತಿ ಪತಾಕೆ ಹಾರಿಸಿದ ಆಟಗಾರ
NAMMUR EXPRESS NEWS
ಜ್ಯೂರಿಚ್: ಭಾರತದ ಸ್ಟಾರ್ ಜಾವೆಲಿನ್ ಥ್ರೋ ಅಥ್ಲೆಟ್ ನೀರಜ್ ಚೋಪ್ರಾ ಗುರುವಾರ ಇತಿಹಾಸ ನಿರ್ಮಿಸಿದ್ದಾರೆ. ಅಗ್ರ-ಶ್ರೇಣಿಯ ಅಥ್ಲೆಟಿಕ್ಸ್ ಸ್ಪರ್ಧೆಯಾದ ಪ್ರತಿಷ್ಠಿತ ಡೈಮಂಡ್ ಲೀಗ್ ಟ್ರೋಫಿಯನ್ನು ಗೆದ್ದಿದ್ದಾರೆ.
ಅಷ್ಟೇ ಅಲ್ಲದೇ, ಈ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಸ್ಪರ್ಧೆಯಲ್ಲಿ 88.44 ಮೀ.ಗಳ ದೂರ ಜಾವೆಲಿನ್ ಎಸೆಯುವ ಮೂಲಕ ನೀರಜ್ ಡೈಮಂಡ್ ಲೀಗ್ನಲ್ಲಿ ಈ ಸಾಧನೆ ಮಾಡಿದ್ದಾರೆ.
ನೀರಜ್ ಚೋಪ್ರಾ ಅವರು ಈ ಬಾರಿ ನಡೆದ ಒಲಂಪಿಕ್ನಲ್ಲಿ ಚಿನ್ನದ ಪದಕ ಗೆದ್ದು, ದೇಶಕ್ಕೆ ಕೀರ್ತಿ ತಂದಿದ್ದರು. ಅಂದಿನಿಂದ ಇಲ್ಲಿಯವರೆಗೆ ನೀರಜ್ ತಮ್ಮ ಗುರಿ ಮುಟ್ಟುವ ಮೂಲಕ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಭಾರತದ ಕೀರ್ತಿ ಪತಾಕೆ ಹಾರಿಸಿದ್ದಾರೆ.