- ಟೋಲ್ ಫ್ರೀ ಸಂಖ್ಯೆ 080-26409689ಕ್ಕೆ ಕರೆ ಮಾಡಿ ಮಾಹಿತಿ ಪಡೆಯಿರಿ
ಬೆಂಗಳೂರು: ಕೇರಳದ ಶಬರಿಮಲೈನಲ್ಲಿ ಜರುಗುವ 2020-21ನೇ ಸಾಲಿನ ಮಂಡಲ-ಮಕರವಿಳಕ್ಕು( ಮಕರ ಸಂಕ್ರಾಂತಿ) ವರ್ಷದ ಕಾರ್ಯಕ್ರಮಕ್ಕೆ ತೆರಳುವ ಕರ್ನಾಟಕ ರಾಜ್ಯದ ಭಕ್ತಾದಿಗಳು, ಯಾತ್ರಾರ್ಥಿಗಳಿಗೆ ಸಂಬಂಧಿಸಿದಂತೆ ಕೇರಳ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. ಕರೋನಾ ಹಿನ್ನೆಲೆ ಈ ನಿಯಮ ಜಾರಿ ಮಾಡಲಾಗಿದೆ.
ಕರ್ನಾಟಕದಿಂದ ತೆರಳುವ ಭಕ್ತಾದಿಗಳಿಗೆ ರಾಜ್ಯ ಧಾರ್ಮಿಕ ದತ್ತಿ ಆಯುಕ್ತ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ. ಯಾತ್ರಾರ್ಥಿಗಳು ಅಗತ್ಯ ಮಾಹಿತಿಗೆ ಹಾಗೂ ತುರ್ತು ಸಂದರ್ಭಗಳಲ್ಲಿ ಸಹಾಯವಾಣಿ ಟೋಲ್ ಫ್ರೀ ಸಂಖ್ಯೆ 080-26409689 ನ್ನು ಸಂಪರ್ಕಿಸಲು ಅಧಿಕೃತ ಪ್ರಕಟಣೆ ತಿಳಿಸಿದೆ.
ಕೇರಳದ ಗಡಿ ಹಾಗೂ ಶಬರಿಮಲೆಯಲ್ಲಿ ಯಾವುದೇ ರೀತಿಯ ಸಮಸ್ಯೆಯಾದರೆ ಸಹಾಯವಾಣಿಗೆ ಕರೆ ಮಾಡಿದರೆ ಸರ್ಕಾರ ಸಮಸ್ಯೆಗೆ ಸೂಕ್ತ ಪರಿಹಾರ ನೀಡಲಿದೆ.