Categories
ಅಂತಾರಾಷ್ಟ್ರೀಯ ಸುದ್ದಿ ಸಿನಿಮಾ

ರಿಷಬ್ ಶೆಟ್ಟಿಗೆ ವಿಶ್ವ ಶ್ರೇಷ್ಠ ಕನ್ನಡಿಗ 2023 ಪ್ರಶಸ್ತಿ!

ರಿಷಬ್ ಶೆಟ್ಟಿಗೆ ವಿಶ್ವ ಶ್ರೇಷ್ಠ ಕನ್ನಡಿಗ 2023 ಪ್ರಶಸ್ತಿ!
– ಅಮೇರಿಕಾದಲ್ಲಿರುವ ಕನ್ನಡಿಗರಿಂದ ಪ್ರಶಸ್ತಿ
– ವಾಷಿಂಗ್ಟನ್ ಮನು ಗೌರವ್ ಮತ್ತು ತಂಡ, ಸಹ್ಯಾದ್ರಿ ಕನ್ನಡ ಸಂಘದಿಂದ ಗೌರವ

NAMMUR EXPRESS NEWS
ಅಮೇರಿಕಾ: ಕಾಂತಾರ ಸಿನೆಮಾದ ಭರ್ಜರಿ ಯಶಸ್ಸಿನ ಬಳಿಕ ಇದೀಗ ಯುನಿವರ್ಸಲ್ ಸ್ಟಾರ್ ಆಗಿರುವ ರಿಷಬ್ ಶೆಟ್ಟಿ ಅವರಿಗೆ ಅಮೇರಿಕಾದಲ್ಲಿರುವ ಕನ್ನಡಿಗರು ವಿಶ್ವ ಶ್ರೇಷ್ಠ ಕನ್ನಡಿಗ 2023 ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.
ಅಮೇರಿಕದ ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿರುವ ಪ್ಯಾರಾಮೌಂಟ್ ಥಿಯೇಟರ್‌ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್‌ಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023 ಪ್ರಶಸ್ತಿ ನೀಡಲಾಗಿದೆ ಈ ವೇಳೆ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಕೂಡ ಹಾಜರಿದ್ದರು.

ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು, ಸಿಯಾಟಲ್‌ನಲ್ಲಿರುವ ಸಹ್ಯಾದ್ರಿ ಕನ್ನಡ ಸಂಘ ರಿಷಬ್ ಶೆಟ್ಟಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ.

ಇದನ್ನೂ ಓದಿ : ನಾಯಿ ವೇದಿಕೆ ಮೇಲೆ ಪ್ರಶಸ್ತಿ ಪಡೆಯಿತು!!

HOW TO APPLY : NEET-UG COUNSELLING 2023

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.