- ಇನ್ನು 30 ವರ್ಷದ ಬಳಿಕ ಚಂದ್ರ ಹೀಗೆ ಕಾಣ್ತಾನೆ ಚಂದ್ರ
ನವ ದೆಹಲಿ: ಚಂದ್ರನ ಅಪರೂಪದ ದರ್ಶನ (ಬ್ಲೂ ಮೂನ್) ಅ.31ರಂದು ಆಗಲಿದೆ. ಬ್ಲೂ ಮೂನ್ ಅಂದ್ರೆ ಚಂದ್ರ ನೀಲಿ ಬಣ್ಣದಲ್ಲಿ ಕಾಣಿಸುತ್ತಾನೆ ಅಂತಲ್ಲ. ಸಾಮಾನ್ಯವಾಗಿ ತಿಂಗಳಿಗೆ ಒಮ್ಮೆ ಕಾಣಿಸಿಕೊಳ್ಳುವ ಹುಣ್ಣಿಮೆ ಚಂದ್ರ ಎರಡನೇ ಹುಣ್ಣಿಮೆಯಂದು ಕಾಣಿಸುವುದಕ್ಕೆ ಬ್ಲೂ ಮೂನ್ ಎನ್ನುತ್ತಾರೆ.
ಅ.1ರಂದು ಕಾಣಿಸಿದ್ದ ಹುಣ್ಣಿಮೆ ಚಂದ್ರ ಈಗ ಅ.31ರಂದು ಕಾಣಿಸಿಕೊಳ್ಳುತ್ತಿದೆ. 2007ರ ಜೂನ್ ತಿಂಗಳಲ್ಲಿ ಈ ರೀತಿಯ ಬ್ಲೂ ಮೂನ್ ಕಾಣಿಸಿಕೊಂಡಿತ್ತು, ಮುಂದಿನ ಬ್ಲೂಮೂನ್ 2050ರ ಸೆ.30 ರಂದು ಕಾಣಸಿಗುತ್ತದೆ. 2018 ರಲ್ಲಿ ಎರಡು ಬ್ಲೂ ಮೂನ್ ಗಳು ಕಾಣಿಸಿಕೊಂಡಿತ್ತು, ಜ.31 ರಂದು ಹಾಗೂ ಮಾ.31 ರಂದು ಬ್ಲೂ ಮೂನ್ ಕಾಣಿಸಿಕೊಂಡಿತ್ತು.