ಉಡುಪಿ ಜಿಲ್ಲೆಯಲ್ಲಿ ಅಕ್ಷರ ದಾಸೋಹ ನೌಕರರ ಹೋರಾಟ
– ಮಕ್ಕಳ ಬಿಸಿಯೂಟಕ್ಕೆ ಯಾವುದೇ ತೊಂದರೆ ಆಗದಂತೆ ಮುಷ್ಕರ ಮಾಡುತ್ತಿರುವ ನೌಕರರು
– ಬಡ ಕಾರ್ಮಿಕರ ಪರ ಸರ್ಕಾರ ನಿಲ್ಲುತ್ತಾ?
NAMMUR EXPRESS NEWS
ಉಡುಪಿ: ಉಡುಪಿ ಜಿಲ್ಲಾದ್ಯಂತ ಮಂಗಳವಾರ ಹಾಗೂ ಬುಧವಾರ ಅಕ್ಷರದಾಸೋಹ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ಬಂದ್ಗೆ ಕರೆ ನೀಡಿದ್ದಾರೆ. ಇದರಿಂದ ಕೆಲವು ಶಾಲೆಗಳಲ್ಲಿ ಮಕ್ಕಳು ಬಿಸಿಯೂಟ ವಂಚಿತರಾಗುವ ಸಾಧ್ಯತೆಗಳಿವೆ. ಅಕ್ಷರ ದಾಸೋಹ ನೌಕರರು ಮುಷ್ಕರ ನಡೆಸಿದರೂ ಮಕ್ಕಳಿಗೆ ಬಿಸಿಯೂಟ ಒದಗಿಸಲು ಯಾವುದೇ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಲಾಗುವುದು. ಶಿಕ್ಷಕರು ಹಾಗೂ ಎಸ್ಡಿಎಂಸಿ ನೆರವಿನೊಂದಿಗೆ ಅಡುಗೆ ಮಾಡುವಂತೆ ಈಗಾಗಲೇ ಎಲ್ಲರಿಗೂ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವೇತನ ಹೆಚ್ಚಳ ಸಹಿತ ವಿವಿಧ ಸೌಲಭ್ಯಗಳನ್ನು ಸರಕಾರ ಒದಗಿಸಬೇಕೆಂದು ಆಗ್ರಹಿಸಿ ಅಕ್ಷರ ದಾಸೋಹ ನೌಕರರು ಪ್ರತಿಭಟನೆಗೆ ಮುಂದಾಗಿದ್ದಾರೆ.