ಕಾಪು ಹೊಸ ಮಾರಿಗುಡಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಭೇಟಿ!
– ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಅಶ್ವಿನಿ ರಾಜ್‌ಕುಮಾರ್
– ಮಾರಿಯಮ್ಮನ ದರ್ಶನ, ಲೇಖನ ಪುಸ್ತಕ ಪಡೆದು ಪ್ರಸಾದ ಸ್ವೀಕರಿಸಿದ ಪುನೀತ್ ಪತ್ನಿ!
NAMMUR EXPRESS NEWS
ಉಡುಪಿ: ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಉಡುಪಿಯ ಕಾಪು ಹೊಸ ಮಾರಿಗುಡಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕಾಪು ಮಾರಿಯಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ್ದಾರೆ. ಈ ವೇಳೆ, ಸಂಪೂರ್ಣ ಜೀರ್ಣೋದ್ಧಾರವಾಗಿರುವ ದೇಗುಲವನ್ನು ವೀಕ್ಷಣೆ ಮಾಡಿದ್ದಾರೆ. ಬಳಿಕ ನವದುರ್ಗ ಲೇಖನ ಪುಸ್ತಕ ಪಡೆದುಕೊಂಡಿದ್ದು, ದೇವಿ ದರ್ಶನದ ಬಳಿಕ ದೇಗುಲದ ಪ್ರಧಾನ ಅರ್ಚಕರು ಪ್ರಸಾದ ನೀಡಿ ಅವರನ್ನು ಗೌರವಿಸಿದ್ದಾರೆ.
