ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ
– ನ.5 ಬೆಳಿಗ್ಗೆ 10:00ಕ್ಕೆ ಬಂಡಿಮಠ ಬಸ್ ನಿಲ್ದಾಣದಲ್ಲಿ ಹೋರಾಟ
– ಜನ ವಿರೋಧಿ ನೀತಿಗಳನ್ನು ಖಂಡಿಸುವ ಸಲುವಾಗಿ ಪ್ರತಿಭಟನೆ
NAMMUR EXPRESS NEWS
ಕಾರ್ಕಳ: ಬಿಜೆಪಿ ಕಾರ್ಕಳ ಮಂಡಲ ವತಿಯಿಂದ ರೈತರ, ದಲಿತರ, ಮಠ ದೇವಸ್ಥಾನಗಳ ಆಸ್ತಿ ಕಬಳಿಕೆ ಮಾಡುತ್ತಿರುವ ವಕ್ಸ್ಬೋರ್ಡ್ನ ಲ್ಯಾಂಡ್ ಜಿಹಾದ್ ಖಂಡಿಸಿ ಸಿದ್ದರಾಮಯ್ಯ ನೇತೃತ್ವದ ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ 05 ನವೆಂಬರ್ 2024, ಮಂಗಳವಾರ ಬೆಳಿಗ್ಗೆ 10:00ಕ್ಕೆ ಬಂಡಿಮಠ ಬಸ್ ನಿಲ್ದಾಣ, ಕಾರ್ಕಳದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಮತೀಯ ಓಲೈಕೆ, ಜನ ವಿರೋಧಿ ನೀತಿಗಳನ್ನು ಖಂಡಿಸುವ ಸಲುವಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಮನವಿ ಮಾಡಲಾಗಿದೆ. ಕ್ಷೇತ್ರದ ಶಾಸಕರು ಸೇರಿದಂತೆ ಮುಖಂಡರು, ಪ್ರಮುಖರು, ಕಾರ್ಯಕರ್ತರು ಭಾಗಿಯಾಗಲಿದ್ದಾರೆ.