ಇನ್ನು ಮುಂದೆ ಮೆಡಿಕಲ್ಲಲ್ಲಿ ಸಿಸಿಟಿವಿ ಕಡ್ಡಾಯ?!
– ಎರಡು ವಾರದ ಕಾಲಾವಕಾಶ ನೀಡಿದ ಆಡಳಿತ
– ಗ್ರಾಹಕರ ಹಿತದೃಷ್ಟಿಯಿಂದ ನಿಯಮ ಜಾರಿ
NAMMUR EXPRESS NEWS
ಉಡುಪಿ : ಸಾರ್ವಜನಿಕರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಉಡುಪಿ ಜಿಲ್ಲೆಯಲ್ಲಿ ಔಷಧಿಗಳನ್ನು ಮಾರಾಟ ಮಾಡುವ ಎಲ್ಲಾ ವೈದ್ಯಕೀಯ ಹಾಗೂ ಫಾರ್ಮಸಿ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿ.ಸಿ ಟಿವಿ ಅಳವಡಿಸುವಂತೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಸಿ.ಸಿ.ಟಿವಿ ಕ್ಯಾಮೆರಾವನ್ನು ಅಳವಡಿಸಲು ಎಲ್ಲಾ ವೈದ್ಯಕೀಯ/ಫಾರ್ಮಸಿ ಶಾಪ್ ಗಳ ಮಾಲೀಕರಿಗೆ ಎರಡು ವಾರಗಳ ಕಾಲಾವಕಾಶ ನೀಡಲಾಗಿದ್ದು, ಜಿಲ್ಲಾ ಔಷಧ ನಿಯಂತ್ರಕರು ಸದರಿ ಅಂಗಡಿಗಳಲ್ಲಿ ಸಿ.ಸಿ ಟಿವಿ ಅಳವಡಿಸಿರುವ ಕುರಿತು ತಪಾಸಣೆ ನಡೆಸಬೇಕು. ಈ ಆದೇಶವನ್ನು ಉಲ್ಲಂಘಿಸುವ ಮೆಡಿಕಲ್/ಫಾರ್ಮಸಿ ಅಂಗಡಿ ಮಾಲೀಕರ ವಿರುದ್ದ ಕಾನೂನು ಪ್ರಕಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ಈ ನಿಯಮ ಎಲ್ಲಾ ಜಿಲ್ಲೆಗಳಿಗೂ ಅನ್ವಯ ಆಗುವ ಸಾಧ್ಯತೆಗಳಿವೆ.